ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು : ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Upayuktha
0


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಅಕ್ಟೋಬರ್ 08 ರಿಂದ 14 ರ ವರೆಗೆ ನಡೆಯಲಿದೆ. 


ಅ.08 ರ ಮಧ್ಯಾಹ್ನ 2.30 ಘಂಟೆಗೆ  ಪಡ್ಯಾರಬೆಟ್ಟದ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಜೀವಂಧರ ಕುಮಾರ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು , ನಿವೃತ್ತ ಪ್ರಾಚಾರ್ಯ ಪ್ರೊ. ದಿನೇಶ್ ಚೌಟ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿಯವರು ಶುಭಾಶಂಸನೆ ಮಾಡಲಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಶ್ರೀನಾಥ್ ಅವರು ಸ್ವಚ್ಛ ಪರಿಸರದ ಕರಪತ್ರವನ್ನು ಬಿಡುಗಡೆ ಮಾಡಲಿದ್ದಾರೆ. 


ಅ. 14 ರಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್ . ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು , ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅತಿಥಿಗಳಾಗಿ ಆಗಮಿಸಲಿದ್ದಾರೆ.  


ವಾರಗಳ ಕಾಲ ಶ್ರಮದಾನ, ಗ್ರಾಮ ಸಮೀಕ್ಷೆ ,  ಶೈಕ್ಷಣಿಕ ಕಾರ್ಯಕ್ರಮ , ಸಾಂಸ್ಕೃತಿಕ  ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶಿಬಿರ ಸಮಿತಿಯ ಅಧ್ಯಕ್ಷ ವಿಕಾಸ್ ಜೈನ್ , ಪೆರಿಂಜೆ  ಹಾಗೂ ಉಜಿರೆಯ  ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top