ತೆಂಕನಿಡಿಯೂರು : ಕೃತಕ ಬುದ್ಧಿಮತ್ತೆ, ಕ್ಲೌಡ್ ಕಂಪ್ಯೂಟರ್ ಟೆಕ್ನಾಲಜಿ, ಎಲೆಕ್ಟ್ರಾನಿಕ್ ಬಿಸಿನೆಸ್ ಇ-ಮಾರ್ಕೆಟಿಂಗ್, ಇ-ಬ್ಯಾಂಕಿಂಗ್ ಮುಂತಾದ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ವಾಣಿಜ್ಯ ಮತ್ತು ವ್ಯವಹಾರ ಕ್ಷೇತ್ರದಲ್ಲಿ ಅಭೂತಪೂರ್ವ ಬದಲಾವಣೆಯನ್ನು ತಂದಿದೆ. ಇದರಿಂದ ಉತ್ಕೃಷ್ಟ ಮಟ್ಟದ ವಾಣಿಜ್ಯ ವ್ಯವಹಾರವನ್ನು ನಡೆಸಲು ಅನುಕೂಲವಾಗುವುದಲ್ಲದೆ, ಜಗತ್ತಿನ ಯಾವುದೇ ಮೂಲೆಯನ್ನು ಸಂಪರ್ಕಿಸಿ ವ್ಯವಹಾರವನ್ನು ನಡೆಸುವ ಸಾಧ್ಯತೆಯನ್ನ ಕಲ್ಪಿಸಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇದರ ವಾಣಿಜ್ಯಶಾಸ್ತç ಪ್ರಾಧ್ಯಾಪಕರಾದ ಡಾ ನಯನ ಎಲ್.ಎಮ್. ನುಡಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಡಿಯೂರು ಇಲ್ಲಿನ ವಾಣಿಜ್ಯಶಾಸ್ತç ಮತ್ತು ವ್ಯವಹಾರ ಅಧ್ಯಯನ ವಿಭಾಗ ಹಾಗೂ ಕಾಲೇಜಿನ ಐಕ್ಯೂಎಸ್‌ಸಿ ಸಹಯೋಗದಲ್ಲಿ ಆಯೋಜಿಸಿದ ವಿಭಾಗದ ಶೈಕ್ಷಣಿಕ ಚಟುವಟಿಕೆಗಳನ್ನು ಉದ್ಘಾಟಿಸಿ, ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ವಾಣಿಜ್ಯ ಮತ್ತು ವ್ಯವಹಾರಗಳ ಬದಲಾವಣೆಯ ವಿವಿಧ ಮಜಲುಗಳನ್ನು ವಿವರಿಸಿ ಮಾತನಾಡಿದರು.
ತಂತ್ರಜ್ಞಾನದ ಈ ಬೆಳವಣಿಗೆ ವಾಣಿಜ್ಯ ಕ್ಷೇತ್ರ ಮಾತ್ರವಲ್ಲದೆ ಜ್ಞಾನವಿಕಾಸಕ್ಕೂ ಅಭೂತಪೂರ್ವ ಕೊಡುಗೆಯನ್ನು ಕೊಟ್ಟಿದೆ. ಸ್ವಯಂ, ಈಡೆಕ್ಸ್, ಲಿಂಕ್ಡ್ ಇನ್ ನಂತಹ ಪ್ಲ್ಯಾಟ್ ಫಾರ್ಮ್ ಗಳು ವಿದ್ಯಾರ್ಥಿಗಳ ಕಲಿಕೆಯ ಉತ್ಕೃಷ್ಟತೆಯನ್ನು ಹೆಚ್ಚಿಸಿದೆ ಮತ್ತು ವಿದ್ಯಾರ್ಥಿಗಳು ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯ ಇರುವ ಜ್ಞಾನವನ್ನು ಇಂದೀಕರಿಸಲು ಸಾಧ್ಯವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಸುರೇಶ್ ರೈ ಕೆ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ರಶ್ಮಿತಾ ರವರಿಗೆ ಗುರುತಿಸಿ ಗೌರವಿಸಲಾಯಿತು. ಶ್ರದ್ಧ ಮತ್ತು ಬಳಗ ಪ್ರಾರ್ಥನೆ ಗೈದರು. ವ್ಯವಹಾರ ಅಧ್ಯಯನ ಶಾಸ್ತç ವಿಭಾಗ ಮುಖ್ಯಸ್ಥರಾದ ಡಾ ರಘು ನಾಯ್ಕ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.
ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಬಿಂದು ಟಿ. ವಂದನಾರ್ಪಣೆಗೈದರು. ಬಿಬಿಎ ವಿದ್ಯಾರ್ಥಿ ನಿತಿನ್ ಜಿ. ಅಂಚನ್ ನಿರೂಪಣೆಗೈದರು. ವಾಣಿಜ್ಯಶಾಸ್ತç ವಿಭಾಗದ ಸಹ ಪ್ರಾಧ್ಯಾಪಕ ಡಾ ಉದಯ ಶೆಟ್ಟಿ ಕೆ, ಐಕ್ಯುಎಸಿ ಸಂಚಾಲಕರಾದ ಡಾ ಮೇವಿ ಮಿರಾಂಡ, ಪ್ಲೇಸ್ಮೆಂಟ್ ಸೆಲ್ ಸಂಚಾಲಕರಾದ ಉಮೇಶ್ ಪೈ, ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ದಿನೇಶ ಎಂ ಉಪಸ್ಥಿತರಿದ್ದರು. 90ಕ್ಕೂ ಅಧಿಕ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನದ ವಿದ್ಯಾರ್ಥಿಗಳು ಸದರಿ ಕಾರ್ಯಕ್ರಮದ ಪ್ರಯೋಜನ ಪಡೆದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ