ಮಂಗಳೂರು: ನಗರದ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಗೋಪಾಲ ಪೂಜಾರಿ ಎಂಬುವವರ ಮನೆಗೆ ಸಿಡಿಲು ಬಡಿದು ಮನೆ ಹಾನಿಗೀಡಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಸಿಡಿಲಿನ ಆರ್ಭಟಕ್ಕೆ ಮನೆಯ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಶಾರ್ಟ್ ಸರ್ಕ್ಯುಟ್‌ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಹುಡಿಯಾಗಿವೆ.
ಸಿಡಿಲಿನ ಶಬ್ದಕ್ಕೆ ಮನೆಯಲ್ಲಿದ್ದ ಮಹಿಳೆ ಶ್ವೇತಾ ಹಾಗೂ 5 ವರ್ಷದ ಮಗುವಿನ ಕಿವಿಗೆ ಹಾನಿಯಾಗಿದೆ. ಸದ್ಯ ಅವರಿಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂದರ್ಭ ನಾಲ್ವರು ಕುಟುಂಬಸ್ಥರು ಮನೆಯಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ