ವೀರಕಂಬ ಶಾರದಾ ಭಜನಾ ಮಂದಿರದಲ್ಲಿ ವೀಣಾಧಾರಿಣಿ ಶಾರದೆಗೆ ಪೂಜೆ

Upayuktha
0

ವೀರಕಂಬ: ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಶ್ರೀ ಶಾರದಾ ಸೇವಾ ಟ್ರಸ್ಟ್ (ರಿ) ಹಾಗೂ ಶ್ರೀ ಶಾರದಾ ಪೂಜಾ ಉತ್ಸವ ಸಮಿತಿ ವತಿಯಿಂದ ಆರಾಧಿಸಿಕೊಂಡು ಬರುತ್ತಿರುವ 39ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಸೂರ್ಯನಾರಾಯಣ ಭಟ್ ಕಶೇಕೋಡಿ ನೇತೃತ್ವದ ವೈದಿಕ ತಂಡ ಗಣ ಹೋಮ ನೆರವೇರಿಸಿ ನಂತರ ವೀಣಾಧಾರಿಣಿ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ಮಾಡಲಾಯಿತು.


ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ತನಕ ಅರ್ಧ ಏಕಹ ಭಜನಾ ಕಾರ್ಯಕ್ರಮ ಆರಂಭವಾಗಿದ್ದು ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯುತ್ತಾ ಇದೆ. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಭೇಟಿ ನೀಡಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಇಂದು (ಅ.22)  ಸಂಜೆ ಗಂಟೆ 4:30 ರಿಂದ ದುರ್ಗಾ ನಮಸ್ಕಾರ ಪೂಜೆ, ಸಂಜೆ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.


ಸೋಮವಾರ (ಅ.23) ಬೆಳಿಗ್ಗೆ ಗಂಟೆ 10:30ಕ್ಕೆ ರಂಗಪೂಜೆ, ಮಹಾಪೂಜೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ನಂತರ ವಿಸರ್ಜನ ಪೂಜೆ ನಡೆದು ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ಎರ್ಮೆ ಮಜಲು ಗಣೇಶ್ ಕೊಡಿ ತನಕ ನಡೆದು ವೀರಕಂಬ ಮಜಿ ಶಾಲಾ ಪಕ್ಕ ಇರುವ ಮಲ್ಲಿಗೆ ಕೆರೆಯಲ್ಲಿ ಜಲಸ್ಥಂಭನ ನೆರವೇರಲಿರುವುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top