ಬರಿಮಾರು: ಜನನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬರಿಮಾರು ಇದರ ವಾರ್ಷಿಕ ಮಹಾಸಭೆ ಶನಿವಾರ (ಸೆ.30) ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಸದಾಶಿವ ಜಿ ಇವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಒಕ್ಕೂಟದ ವಾರ್ಷಿಕ ವರದಿಯನ್ನು ಮುಖ್ಯ ಪುಸ್ತಕ ಬರಹಗಾರರಾದ ಜಯಶ್ರೀಯವರು ಮಂಡಿಸಿದರು.
ಲೆಕ್ಕ ಪತ್ರ ಪರಿಶೀಲನೆಯನ್ನು ಒಕ್ಕೂಟದ ಕೋಶಾಧಿಕಾರಿ ಸವಿತ ಮಂಡನೆ ಮಾಡಿದರು. ಕೃಷಿ ಸಖಿ ಕಾರ್ಯಕ್ರಮದ ನಿರೂಪಣೆ ಮಾಡಿದರು. ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಯಾಗಿರುವ (LCRP) ಪವಿತ್ರ ಸ್ವಾಗತಿಸಿದರು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರು ವಹಿಸಿದ್ದು ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕಿನ ವಲಯ ಮೇಲ್ವಿಚಾರಕರು, ಮಾಜಿ ಅಧ್ಯಕ್ಷರು ಉದ್ಯೋಗ ಖಾತರಿ IEC ಸಂಯೋಜಕರಾದ ರಾಜೇಶ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸದಸ್ಯರು ಉಪಸ್ಥಿತರಿದ್ದರು.
ತಾಲೂಕು ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕದ ಮೇಲ್ವಿಚಾರಕರಾದ ಕುಸುಮ ಅವರು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ, ನಿಕಟಪೂರ್ವ ಪದಾಧಿಕಾರಿಗಳಿಂದ ನೂತನ ಪದಾದಿಕಾರಿಗಳಿಗೆ ಒಕ್ಕೂಟದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಪಶುಸಖಿ ಸುಜಾತ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ