ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಕಾರ್ಯಕ್ರಮ ಸಂಯೋಜಕರ ಜವಾಬ್ದಾರಿಯನ್ನು ತಿಳಿಸುವ ಉದ್ದೇಶದಿಂದ ಅ.16ರಂದು ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ 5ನೇ ಮಹಡಿಯ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಯಕ್ರಮ ಸಂಯೋಜಕರ ಸಭೆ ಜರಗಿತು.
ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜಂಟಿ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಸಹ ಸಂಚಾಲಕರಾದ ಕರ್ನೂರ್ ಮೋಹನ್ ರೈ,ಪೋಷಕ ಸದಸ್ಯರಾದ ಸುಧಾಕರ್ ಪೂಂಜ ಸುರತ್ಕಲ್, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಕೆ ಭಂಡಾರಿ, ಮಾಧ್ಯಮ ಸಮಿತಿಯ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಸಾಯಿನಾಥ್ ಶೆಟ್ಟಿ ಮುಂಡ್ಕೂರು, ಶರತ್ ಶೆಟ್ಟಿ ಕಿನ್ನಿಗೋಳಿ, ನವೀನ್ ಶೆಟ್ಟಿ ಎಡ್ಮೆಮಾರು, ನಿತೇಶ್ ಶೆಟ್ಟಿ ಎಕ್ಕಾರ್, ಸಾಹಿಲ್ ರೈ, ಅರವಿಂದ್ ರೈ, ಡಾ. ಪ್ರಿಯಾ ಹರೀಶ್ ಶೆಟ್ಟಿ, ಡಾ. ಮಂಜುಳಾ ಶೆಟ್ಟಿ, ಶ್ರೀಮತಿ ರಾಜೇಶ್ವರಿ ಡಿ.ಶೆಟ್ಟಿ ಸುರತ್ಕಲ್, ಡಾ ಸುಧಾ ಶೆಟ್ಟಿ ಸುರತ್ಕಲ್, ಚೇತನ್ ಶೆಟ್ಟಿ, ಅಭಿಷೇಕ್ ಶೆಟ್ಟಿ, ಶ್ರೀಮತಿ ಅಕ್ಷತಾ ಶೆಟ್ಟಿ ಎಡ್ಮೆಮಾರ್, ಭಾಗ್ಯರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಕಾರ್ಕಳ, ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಶ್ರೀಮತಿ ಕವಿತಾ ಪಕ್ಕಳ, ಶ್ರೀಮತಿ ಸುಲತಾ ಶೆಟ್ಟಿಯವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ