ಕ್ರೀಡೆ ಮತ್ತು ಸಂಸ್ಕೃತಿಯನ್ನು ಬಿಟ್ಟರೆ ಬಂಟರಿಗೆ ಬದುಕೇ ಇಲ್ಲ: ಡಾ. ಮೋಹನ್ ಆಳ್ವ

Upayuktha
0

ಉಡುಪಿಯಲ್ಲಿ ಬಂಟರ ಸಾಂಸ್ಕೃತಿಕ ವೈಭವ ಉದ್ಘಾಟನೆ 



ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಉದ್ಘಾಟನಾ ಕಾರ್ಯಕ್ರಮ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಶೆಟ್ಟಿ ತೆರೆದ ಮೈದಾನದಲ್ಲಿನ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ಭಾನುವಾರ ಮುಂಜಾನೆ ನೆರವೇರಿತು.



ಬಳಿಕ ಸಭೆಯನ್ನುದ್ದೇಶಿಸಿ ಮಾತಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು, "ಯಕ್ಷಗಾನಕ್ಕೆ ಬಂಟರು ಕೊಟ್ಟಿರುವ ಕೊಡುಗೆ ಅಪಾರ. ಟೆಂಕುತಿಟ್ಟು, ಬಡಗುತಿಟ್ಟುಗಳಲ್ಲಿ ನಮ್ಮ ಅನೇಕ ಕಲಾವಿದರು ಇದ್ದಾರೆ. ಬಂಟ ಸಮುದಾಯ ಇಂದು ಕಲೆಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಾ ಬೆನ್ನೆಲುಬಾಗಿ ನಿಂತಿದೆ. ಕ್ರೀಡೆ ಮತ್ತು ಸಂಸ್ಕೃತಿಯನ್ನು ಬಿಟ್ಟು ಬಂಟರ ಬದುಕೇ ಇಲ್ಲ. ಈ ಹಿನ್ನೆಲೆಯಲ್ಲಿ ಬಂಟರ ಸಮ್ಮೇಳನ ಅರ್ಥಪೂರ್ಣವಾಗಿ ನಡೆಯುತ್ತಿದೆ. ಐಕಳ ಹರೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಬಹಳ ಒಳ್ಳೆಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.



ವೇದಿಕೆಯಲ್ಲಿ ಹೇರಂಬ ಇಂಡಸ್ಟ್ರಿಸ್ ಸಿಎಂಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವ, ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ, ಬಿಜೆಪಿ ಮುಖಂಡ ಮಟ್ಟಾರ್ ರತ್ನಾಕರ್ ಹೆಗ್ಡೆ, ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್ಸ್ ಮಾಲಕ ರಾಜೇಂದ್ರ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ದ.ಕ. ಜಿಲ್ಲಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಮೆರಿಟ್ ಹಾಸ್ಪಿಟಾಲಿಟಿ ಸಿಎಂಡಿ ಬೆಲ್ಲಾಡಿ ಅಶೋಕ್ ಶೆಟ್ಟಿ, ಉಡುಪಿ ಬಂಟರ ಸಂಘದ ಅಧ್ಯಕ್ಷ ಉದ್ಯಮಿ ಪುರುಷೋತ್ತಮ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ ದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ , ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, ಸಂಯೋಜಕರಾದ ಸುಪ್ರಸಾದ್ ಶೆಟ್ಟಿ ಬೈಕಾಡಿ, ಮೋಹನ್ ಶೆಟ್ಟಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು.



ಅಶೋಕ್ ಪಕ್ಕಳ ಕಾರ್ಯಕ್ರಮ ನಿರೂಪಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಧನ್ಯವಾದ ಸಮರ್ಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top