ಶ್ರೀನಿವಾಸ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಮನೋ ಆರೋಗ್ಯ ಹಾಗೂ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

Upayuktha
0



ಮಂಗಳೂರು: “ಮಾನಸಿಕ ಆರೋಗ್ಯವು ಜನರ ಮೂಲಭೂತ ಮಾನವ ಹಕ್ಕು. ವ್ಯಕ್ತಿಯ ಮಾನಸಿಕ ಆರೋಗ್ಯವು ಆರೋಗ್ಯಕರ, ಸದೃಢ ಸಮಾಜ ಮತ್ತು ರಾಷ್ಟ್ರವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ಮತ್ತು ಸಮತೋಲಿತ ಜೀವನವನ್ನು ಸಾಧಿಸಲು ಮನೋ ಹಾಗೂ ದೈಹಿಕ ಆರೋಗ್ಯವನ್ನು ಹೊಂದಿರುವುದು ಕಡ್ಡಾಯವಾಗಿದೆ. 2023ರ ವಿಶ್ವ ಮಾನಸಿಕ ಆರೋಗ್ಯ ದಿನದ ಧ್ಯೇಯವಾಕ್ಯ ‘ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’, ಈ ಮೂಲಕ ವಿಶ್ವದಾದ್ಯಂತ ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ” ಎಂದು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅರುಣಾ ಎಡಿಯಾಳ್ ಇವರು ತಿಳಿಸಿದರು. 



ಅವರು ಅಕ್ಟೋಬರ್ 10ರಂದು ಶ್ರೀನಿವಾಸ ವಿಶ್ವವಿದ್ಯಾಲಯ, ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ ‘ವಿಶ್ವ ಮನೋ ಆರೋಗ್ಯ ಹಾಗೂ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ’ಯನ್ನು ವಿದ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 



ಪ್ರಶಿಕ್ಷಣಾರ್ಥಿಗಳು ‘ವಿವಿಧ ರೀತಿಯ ಮಾನಸಿಕ ಸಮಸ್ಯೆಗಳು, ಯಾವುದೇ ವರ್ಗ ಹಾಗೂ ಆಯಸ್ಸಿನ ಬೇಧವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭಗಳು, ಇದರಿಂದಾಗುವ ಕೌಟುಂಬಿಕ ತೊಂದರೆಗಳು ಹಾಗೂ ಇಂತಹ ಸಂದರ್ಭಗಳನ್ನು ತಡೆಗಟ್ಟುವ ರೀತಿ, ಇದರಲ್ಲಿ ಶಿಕ್ಷಕರ ಪಾತ್ರ, ಖಿನ್ನತೆಗೆ ಒಳಪಡದೆ ಮಾನಸಿಕ ಸದೃಢತೆಯನ್ನು ಬೆಳೆಸುವ’ ಕುರಿತಾಗಿ ವೈವಿಧ್ಯ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು. 



ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪದ್ಮನಾಭ ಸಿ.ಹೆಚ್‌ರವರು ಅಧ್ಯಕ್ಷೀಯ ಮಾತುಗಳನ್ನಾಡಿದರು. ಪ್ರಶಿಕ್ಷಣಾರ್ಥಿ ಪ್ರೇಮ ಡಿಸೋಜ ಪ್ರಾಸ್ತಾವಿಕವಾಗಿ ನುಡಿದರು. ಸುಮ ಭಟ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಸಂಸ್ಥೆಯ ಸಹ ಪ್ರಾಧ್ಯಾಪಕರಾದ ಡಾ. ವಿಜಯಲಕ್ಷ್ಮೀ  ನಾಯಕ್ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ಮಹಮದ್ ಸಲ್ವಾನ್ ಬಿ ವಂದಿಸಿದರು. ಸುಚಿತ್ರ ಕುಮಾರಿ ಮತ್ತು ವಿದ್ಯಾಶ್ರೀ ಕೆ, ಇವರು ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top