ತೆಂಕನಿಡಿಯೂರು: ಜಗತ್ತಿನ ಎಲ್ಲಾ ಮಹಾತ್ಮರಲ್ಲಿ ಮಹಾತ್ಮ ಗಾಂಧೀಜಿಯವರು ಅತ್ಯಂತ ಶ್ರೇಷ್ಠತೆಯನ್ನು ಪಡೆದಿದ್ದಾರೆ. ನುಡಿದಂತೆ ನಡೆದ ಮತ್ತು ಕೃತಿಯನ್ನು ಕಾರ್ಯರೂಪದಲ್ಲಿ ಮಾಡಿ ತೋರಿಸಿದ ವಿಶ್ವಮಾನ್ಯರು ಮಹಾತ್ಮಾ ಗಾಂಧಿ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ತಿಳಿಸಿದರು.
ಅವರು ಅಕ್ಟೋಬರ್ 2 ರಂದು ಗಾಂಧೀಜಿಯವರ 156ನೇ ಜನ್ಮ ದಿನಾಚರಣೆಯಂದು ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ಪ್ರಸಾದ್ ರಾವ್ ಎಂ. ಗಾಂಧೀಜಿ ನಮ್ಮೆಲ್ಲರ ಆತ್ಮಸಾಕ್ಷಿಯ ಪ್ರತೀಕ. ನಮ್ಮೊಳಗೆ ನಾವು ಪ್ರಶ್ನೆ ಮಾಡುವಂತಹ ಮನಸ್ಥಿತಿ ನಾವು ಬೆಳೆಸಬೇಕು. ಈ ನಿಟ್ಟಿನಲ್ಲಿ ನಮಗೆ ಗಾಂಧಿ ಮುಖ್ಯರಾಗುತ್ತಾರೆ ಎಂದರು. ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ರಾಧಾಕೃಷ್ಣ ಸ್ವಾಗತಿಸಿದರು. ಉಮೇಶ್ ಪೈ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ