ಈಜು ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಚಿನ್ನ, ಬೆಳ್ಳಿ ಪದಕ ಗೆದ್ದುಕೊಟ್ಟ ಶ್ರೀಧರ ಉಳಿತ್ತಾಯ

Upayuktha
0

ಬೆಂಗಳೂರಿನಲ್ಲಿ ನಡೆದ 24ನೇ ರಾಜ್ಯ ಮಟ್ಟದ ಮಾಸ್ಟರ್ಸ್‌ ಸ್ವಿಮ್ಮಿಂಗ್ ಸ್ಪರ್ಧೆ


ಬಾರ್ಕೂರು: ಬೆಂಗಳೂರಿನ ವಿಜಯನಗರ ಸ್ವಿಮ್ಮಿಂಗ್ ಪೂಲ್‌ನಲ್ಲಿ ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಷನ್ ನ.4 ಮತ್ತು 5 ರಂದು  ಆಯೋಜಿಸಿದ್ದ 24ನೇ ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಬಾರಕೂರು ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಶ್ರೀಧರ ಉಳಿತ್ತಾಯ ಇವರು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ.


ಇವರು 100 ಮೀಟರ್ ಬಟರ್ ಫ್ಲೈನಲ್ಲಿ ಚಿನ್ನದ ಪದಕ, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ, 50 ಮೀಟರ್ ಬಟರ್ ಫ್ಲೈನಲ್ಲಿ ಬೆಳ್ಳಿ ಪದಕ, ರಿಲೇಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸಾಲಿಗ್ರಾಮ ನಿವಾಸಿಯಾಗಿದ್ದು, ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್ಬಿನ ಸದಸ್ಯರಾಗಿದ್ದು ಆಸಕ್ತರಿಗೆ ಈಜು ತರಬೇತಿಯನ್ನು ಕೊಡುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top