ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ನಡೆಯುವ 'ಬೆಂಗಳೂರು ಕಂಬಳ'ಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ತಿಳಿಸಿದರು.
ನ.25 ಮತ್ತು 26ರಂದು ಅರಮನೆ ಮೈದಾನದಲ್ಲಿ ನಡೆಯುವ ಕಂಬಳದ ತಯಾರಿಗಾಗಿ ಇಂದು ಬೆಂಘಳುರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಳ ಜತೆಗೆ ನಡೆದ ಬೃಹತ್ ಸಮಾಲೋಚನಾ ಸಭೆಯ ಬಳಿಕ ಬಹಿರಂಗ ಸಮಾವೇಶದಲ್ಲಿ ಅವರು ಈ ಮಾಹಿತಿ ನೀಡಿದರು.
'ಬೆಂಗಳೂರು ಕಂಬಳ- ನಮ್ಮ ಕಂಬಳ'ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 1 ಕೋಟಿ ರೂ ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದರು.
ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿಯ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾ ತಾರೆಯರು ಆಗಮಿಸಲಿದ್ದಾರೆ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದರು.
ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಯಲಿದೆ. ಈಗಾಗಲೇ 150ಕ್ಕೂ ಹೆಚ್ಚು ಕೋಣಗಳ ನಂದಣಿ ನಡೆದಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಅದ್ದೂರಿಯಾಗಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಕರಾವಳಿ ಅತ್ಯಂತ ಜನಪ್ರಿಯ ಜಾನಪದ ಕ್ರೀಡೆಯಾಗಿರುವ ಕಂಬಳ ಇತ್ತೀಚಿನ ವರ್ಷಗಳಲ್ಲಿ ಸ್ಟಾರ್‌ಗಿರಿ ಪಡೆದುಕೊಂಡಿದ್ದು, ಅದರ ಮುಂದಿನ ಹಂತವಾಗಿ ಬೆಂಗಳೂರು ಕಂಬಳ ಆಯೋಜನೆಯಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ