'AETERNUS 2023' ಅಂತರ್ ಕಾಲೇಜು ಸ್ಪರ್ಧೆ: ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Upayuktha
0


ಅಡ್ಯನಡ್ಕ: ನವೆಂಬರ್ 16ರಂದು ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ನಡೆದ AETERNUS 2023 ಸ್ಪರ್ಧೆಯಲ್ಲಿ ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಸಮಗ್ರ ಪ್ರಶಸ್ತಿಯೊಂದಿಗೆ ರೂಪಾಯಿ 10,000 ವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.


ಬಹುಮಾನ ವಿಜೇತರ ವಿವರ ಇಂತಿದೆ.

ಪೋಸ್ಟರ್ ತಯಾರಿಯಲ್ಲಿ ಮೋಕ್ಷಾ (ಪ್ರಥಮ ಬಹುಮಾನ), ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ- ಪೂಜಾಶ್ರೀ (ದ್ವಿತೀಯ ಬಹುಮಾನ)

ಬೆಂಕಿ ರಹಿತ ಅಡುಗೆ ಸ್ಪರ್ಧೆಯಲ್ಲಿ- ಸಿಝಾ ಮತ್ತು ವಾಫಿಯಾ (ದ್ವಿತೀಯ ಬಹುಮಾನ) ಹಾಗೂ ಮಡಕೆ ಅಲಂಕಾರ ಸ್ಪರ್ಧೆಯಲ್ಲಿ ನವ್ಯಶ್ರೀ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.


ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದ ಎಲ್ಲ ವಿದ್ಯಾರ್ಥಿಗಳಿಗೂ, ಪ್ರೋತ್ಸಾಹಿಸಿ ಸಲಹೆ, ಮಾರ್ಗದರ್ಶನ ನೀಡಿ ಕರೆದುಕೊಂಡು ಹೋದ ಗಣಿತಶಾಸ್ತ್ರ ಉಪನ್ಯಾಸಕರಾದ ಗಣೇಶ್ ಕೆ ಆರ್  ಅವರಿಗೂ ಕಾಲೇಜಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top