ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆ ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 'ಕರ್ನಾಟಕ ಸಂಭ್ರಮ - 50' ರಾಜ್ಯೋತ್ಸವ ಕಾರ್ಯಕ್ರಮವು ಇಂದು (ನ.1) ನಡೆಯಿತು.
ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಮಾತನಾಡಿ, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಘೋಷವಾಕ್ಯದೊಡನೆ ರಾಜ್ಯಾದ್ಯಂತ 'ಕರ್ನಾಟಕ ಸಂಭ್ರಮ - 50' ಈ ಅಭಿಯಾನವನ್ನು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಮ್ಮಿಕೊಂಡಿದೆ ಎಂದು ಹೇಳಿದರು.
ನಾಡಗೀತೆ, ರಾಷ್ಟ್ರಗೀತೆ, ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿಗದಿಪಡಿಸಿರುವ ಕನ್ನಡ ಭಾಷೆ ಮತ್ತು ಕರ್ನಾಟಕ ರಾಜ್ಯದ ಅಭಿಮಾನವನ್ನು ಬಿಂಬಿಸುವ ಕನ್ನಡ ಹಾಡುಗಳನ್ನು ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಹಾಡಿದರು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ವಂದನಾರ್ಪಣೆಗೈದರು. ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


