ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆ: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Chandrashekhara Kulamarva
0




ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ನವೆಂಬರ್ 10ರಂದು ಉದ್ಘಾಟನೆಗೊಂಡಿತು.


ಜನತಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಇದರ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅವರು ಗುಂಡೆಸೆತದ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ, ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು, ಆಡಳಿತ ಮಂಡಳಿ ಸದಸ್ಯರಾದ ಶಂಕರ್ ಸಾರಡ್ಕ, ಅಬ್ದುಲ್ ಕರೀಮ್ ಕುದ್ದುಪದವು, ಎ. ಗೋವಿಂದರಾಯ ಶೆಣೈ ಮತ್ತಿತರ ಗಣ್ಯರು ಉಪಸ್ಥಿತರಿದ್ದು, ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. 


ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕಾಲೇಜಿನ ವಿದ್ಯಾರ್ಥಿ ನಾಯಕಿ ಕು. ನಮಿತಾ ಪಿ.ಕೆ. ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಿ. ಶ್ರೀನಿವಾಸ್ ಸ್ವಾಗತಿಸಿ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ವಂದಿಸಿದರು. ಕನ್ನಡ ಅಧ್ಯಾಪಕರಾದ ಶಿವಕುಮಾರ್ ಸಾಯ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಗೌಡ ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪಿ. ಉದಯಕೃಷ್ಣ ಭಟ್ ನೇತೃತ್ವ ವಹಿಸಿದ್ದರು. ಜನತಾ ಪದವಿಪೂರ್ವ ಕಾಲೇಜು, ಜನತಾ ಪ್ರೌಢಶಾಲೆ, ಜನತಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥರು, ಎಲ್ಲಾ ಬೋಧಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಸ್ವಯಂಸೇವಕರು ಸಹಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದ್ದಾರೆ.


إرسال تعليق

0 تعليقات
إرسال تعليق (0)
To Top