ಡಿಸೆಂಬರ್ 14 ರಿಂದ 17ರವರೆಗೆ 29ನೇ ವರ್ಷದ "ಆಳ್ವಾಸ್ ವಿರಾಸತ್ 2023"

Upayuktha
0


ಮೂಡಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’. ಈ ವರ್ಷ ಆಳ್ವಾಸ್ ವಿರಾಸತ್‍ಗೆ 29ನೇ ವರ್ಷವಾಗಿದ್ದು ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದು ‘ಆಳ್ವಾಸ್ ವಿರಾಸತ್ 2023’ ಅತ್ಯಂತ ಯಶಸ್ವಿ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ. 


‘ಆಳ್ವಾಸ್ ವಿರಾಸತ್ 2023’ ಕ್ಕೆ ದಿನಾಂಕ ನಿಗದಿಯಾಗಿದ್ದು ಡಿಸೆಂಬರ್ 14ರಂದು ಪ್ರಾರಂಭವಾಗಿ 17ರಂದು ಮುಕ್ತಾಯಗೊಳ್ಳಲಿದೆ. ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ನಾಲ್ಕು ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ಜರುಗಲಿದೆ. ಪ್ರತಿದಿನ ಮುಸ್ಸಂಜೆ 6.00 ಗಂಟೆಗೆ ಪ್ರಾರಂಭವಾಗುವ ಈ ಉತ್ಸವವು ರಾತ್ರಿ 9.30ಕ್ಕೆ ಮುಕ್ತಾಯಗೊಳ್ಳುತ್ತವೆ.


ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ಕಾರ್ಯಕ್ರಮಗಳು ನಡೆಯಲಿದೆ. ಇದು ಬೃಹತ್ ವೇದಿಕೆಯಿದಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಕಣ್ತುಂಬಿಕೊಳ್ಳಲು ಅನುವಾಗುವಂಥಾ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. 


ಡಿಸೆಂಬರ್ 14, 15, 16 ಮತ್ತು17ನೇ ದಿನಾಂಕಗಳಂದು ನಾಲ್ಕು ದಿನಗಳ ಕಾಲ ನಡೆಯುವ ರಾಷ್ಟೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 2023ಕ್ಕೆ ಸಂಸ್ಕೃತಿ ಪ್ರಿಯರೂ, ಕಲಾ ಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top