ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ನ. 23ಕ್ಕೆ ಉಪನ್ಯಾಸ ಕಾರ್ಯಕ್ರಮ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನವೆಂಬರ್ 23ರಂದು 11 ಗಂಟೆಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಗುರಿ ಮತ್ತು ದೃಷ್ಟಿ ಎಂಬ ವಿಚಾರವಾಗಿ ಪ್ರೇರಣಾತ್ಮಕ ಉಪನ್ಯಾಸ ನಡೆಯಲಿದೆ. 



ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಡಿ.ಆರ್.ಡಿ.ಒ ಹಾಗೂ ಎ.ಡಿ.ಎಯ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಪ್ರಕಾಶ್ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸುವರು. ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಹಾಗೂ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.












Post a Comment

0 Comments
Post a Comment (0)
To Top