ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ / ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಲಿಖಿತ ಪರೀಕ್ಷೆ ಆಧಾರದಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ. ಸ್ಟೈಫಂಡ್ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 1 ಕೊನೆಯ ದಿನ.


ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿ.ಡಬ್ಲ್ಯೂ.ಡಿ ಕಟ್ಟಡ, ನೆಹರು ಮೈದಾನದ ಎದುರು, ಮಂಗಳೂರು(ಮೊಬೈಲ್ ಸಂ: 94808 41227)  ಈ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top