ರಾಷ್ಟಮಟ್ಟದ ಕರಾಟೆ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ

Upayuktha
0



ಪುತ್ತೂರು: ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದ ಕೊರಗಪ್ಪ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.




ದ್ವಿತೀಯ ಪಿಯುಸಿ ಕಲಾವಿಭಾಗದ ಅರುಣ್ ಕುಮಾರ್ (ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ) ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಚೇತನ್ ಎನ್ ಆರ್ (ಮಾಡ್ನೂರು ಗ್ರಾಮದ ರಾಜೇಶ್ ಎಚ್ ಮತ್ತು ಲೀಲಾವತಿ ದಂಪತಿ ಪುತ್ರ) ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top