ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ

Upayuktha
0

ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.


ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್ 400 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿದ್ದಾರೆ. ಈತನು ಆರ್ಯಾಪು ಗ್ರಾಮದ ರವಿಪ್ರಕಾಶ್ ಕೆ.ಸಿ ಮತ್ತು ಚಂದ್ರಕಲಾ ಕೆ ವಿ ದಂಪತಿ ಪುತ್ರ.


ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿದ್ದಾನೆ. ಈತನು ಕಬಕದ ಬಿ. ನಾಗರಾಜ್ ಹೆಗ್ಡೆ ಮತ್ತು ಭಾನುಮತಿರವರ ಪುತ್ರ.


ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ತನ್ವಿ ಎಸ್ 800 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಈಕೆ ನೆಟ್ಲಮುಡ್ನೂರು ಗ್ರಾಮದ  ಶಶಿಧರ ಶೆಟ್ಟಿ ಮತ್ತು ರೇಷ್ಮಾ ದಂಪತಿ ಪುತ್ರಿ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top