ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಆಯುಷ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಶೀಘ್ರ ಆರಂಭ: ಡಾ.ಆನಂದ್

Upayuktha
0


ಮಂಗಳೂರು: ವೆನ್ಲಾಕ್ ಆಯುಷ್ ಆಸ್ಪತ್ರೆಯ ವತಿಯಿಂದ ದೇಶದಲ್ಲಿಯೇ ಪ್ರಥಮವಾಗಿ ಆಯುಷ್ ಸ್ಫೋಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್  ಆರಂಭವಾಗಲಿದೆ ಎಂದು ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ತಿಳಿಸಿದ್ದಾರೆ.


ನಗರದ ಆಯುಷ್ ಆಸ್ಪತ್ರೆಯಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ವೆನ್ಲಾಕ್ ಆಯುಷ್ ಆಸ್ಪತ್ರೆಯ ವತಿಯಿಂದ ಗುರುವಾರ ಆರಂಭವಾದ ಉಚಿತ ಆಯುಷ್ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಮಂಗಳೂರು ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಏಕಕಾಲದಲ್ಲಿ 96 ಆಯುಷ್ ಥೆರಪಿಗಳನ್ನು ನೀಡುವ ಸೌಲಭ್ಯಗಳನ್ನು ಒಳಗೊಂಡಿದೆ. ನರಚಿಕಿತ್ಸೆಗೆ ಸಂಬಂಧಿಸಿದಂತೆ ಇರುವ ನಿಮ್ಹಾನ್ಸ್ ಆಸ್ಪತ್ರೆಯ ಮಾದರಿಯಲ್ಲಿ ಎಲುಬು ಮತ್ತು ಅಸ್ತಮ ಚಿಕಿತ್ಸೆಗೆ ದೇಶದಲ್ಲಿ ಉತ್ಕೃಷ್ಟ ಚಿಕಿತ್ಸೆ ನೀಡುವ ಏಕೈಕ ಆಸ್ಪತ್ರೆಯಾಗಿ ವೆನ್ಲಾಕ್ ನ ಅಯುಷ್ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸುವ ಗುರಿ ಇದೆ ಎಂದು ವೆನ್ಲಾಕ್ ಆಯುಷ್ ಆಸ್ಪತ್ರೆಯ ಆಯುಷ್  ಜಿಲ್ಲಾ ವೈದ್ಯಾಧಿಕಾರಿ ಡಾ. ಇಕ್ಬಾಲ್ ತಿಳಿಸಿದರು.


ಕ್ರೀಡಾ ಪಟುಗಳಿಗೆ ಚಿಕಿತ್ಸೆ ನೀಡುವ ಆಯುಷ್ ಚಿಕಿತ್ಸಾ ವಿಭಾಗವನ್ನು ವೆನ್ಲಾಕ್ ಆಸ್ಪತ್ರೆಯ ವತಿಯಿಂದ ಆರಂಭಿಸ ಲಾಗುವುದು ಪೂರ್ಣ ಪ್ರಮಾಣದ ಸಿಬ್ಬಂದಿಗಳ ನೇಮಕಾತಿ ಆದ ಬಳಿಕ ಇನ್ನಷ್ಟು ಸೇವೆ ನೀಡಲು ಸಾಧ್ಯ ಎಂದು ಅವರು ಹೇಳಿದರು.


ಆಯುಷ್ ಆಸ್ಪತ್ರೆಯ ವೈದ್ಯರಾದ ಡಾ. ಸೈಯ್ಯದ್ ಹುಸೈನ್, ಡಾ. ಬಸವರಾಜ್, ಡಾ. ಯಶ್ವಿತ್, ಡಾ. ಪ್ರಕಾಶ್, ಡಾ. ಅಜಿತ್ ನಾಥ್  ಇಂದ್ರ, ದ.ಕ  ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ಅನ್ನು ಮಂಗಳೂರು, ಭಾಸ್ಕರ ರೈ ಕಟ್ಟ, ಪುಷ್ಪ ರಾಜ್ ಬಿ.ಎನ್, ಮಹಮ್ಮದ್ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top