ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ್ ಆಯ್ಕೆ

Upayuktha
0

ಆರ್.ಅಶೋಕ್ ಸಮರ್ಥ ಆಯ್ಕೆ ನಳಿನ್ ಕುಮಾರ್ ಹೇಳಿಕೆ 



ಮಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರಿನ ಪದ್ಮನಾಗಭರ ಕ್ಷೇತ್ರದ ಶಾಸಕ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಬರೋಬ್ಬರಿ 6 ತಿಂಗಳ ಬಳಿಕ ವಿರೋಧ ಪಕ್ಷದ ನಾಯಕನನ್ನು ಬಿಜೆಪಿ ನಾಯಕನನ್ನು ಬಿಜೆಪಿ ಆಯ್ಕೆ ಮಾಡಿದೆ. 


ಕಳೆದ ವಾರವಷ್ಟೇ ಬಿಜೆಪಿ ರಾಜ್ಯಾಧ್ಯಕ್ಷನ ಆಯ್ಕೆಯಾಗಿತ್ತು. ಇಂದು ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆರ್.ಅಶೋಕವರನ್ನು ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಇದರ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸನ್ನದ್ಧವಾಗುತ್ತಿದೆ.


ರಾಜ್ಯ ವಿಧಾನಸಭೆಯ ಪ್ರತಿ ಪಕ್ಷ ನಾಯಕನಾಗಿ ನೇಮಕಗೊಂಡ ಆರ್.ಅಶೋಕ್ ಅವರಿಗೆ ಬಿಜೆಪಿಯ  ನಿಕಟಪೂರ್ವ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.


ಉಪ ಮುಖ್ಯಮಂತ್ರಿಯಾಗಿ, ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಆರ್.ಅಶೋಕ್ ಅವರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಉತ್ತಮ‌ ಆಯ್ಕೆಯಾಗಿದ್ದಾರೆ. ಅವರ ನೇತ್ರತ್ವದಲ್ಲಿ ಬಿಜೆಪಿ ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸಲಿದೆ ಎಂದು ನಳಿನ್ ಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top