ಪುತ್ತೂರು: 24ನೇ ರಾಜ್ಯ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ 2023- ಬೆಂಗಳೂರು ಮಹಾನಗರ ಕಾರ್ಪೊರೇಷನ್ ಸ್ವಿಮ್ಮಿಂಗ್ ಪೂಲ್, ವಿಜಯನಗರ ಅಕ್ವಾಟಿಕ್ ಸೆಂಟರ್ ನಲ್ಲಿ ಕರ್ನಾಟಕ ಸ್ವಿಮ್ಮಿಂಗ್ ಎಸೋಸಿಯೆಷನ್ (ರಿ) ವತಿಯಿಂದ ನಡೆದ ರಾಜ್ಯಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಧನುಷ್ ರೈ ಯವರು ಭಾಗವಹಿಸಿ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮತ್ತು 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಹಾಗೂ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಎನ್. ಜೆ. ರೈ ನುಳಿಯಾಲು ಮತ್ತು ಕವಯಿತ್ರಿ ಮಲ್ಲಿಕಾ ಜೆ ರೈ ಗುಂಡ್ಯಡ್ಕ ಪುತ್ತೂರುರವರ ಪುತ್ರರಾದ ಧನುಷ್ ರೈಯವರು ಪ್ರಾಥಮಿಕ ಮತ್ತು ಪ್ರೌಢ ವಿದ್ಯಾಭ್ಯಾಸವನ್ನು ವಿವೇಕಾನಂದ ತೆಂಕಿಲ, ಪಿಯು ಶಿಕ್ಷಣವನ್ನು ಅಂಬಿಕ ವಿದ್ಯಾಲಯ ನೆಲ್ಲಿಕಟ್ಟೆ ಹಾಗೂ ಮೆರಿನ್ ಇಂಜಿನಿಯರಿಂಗ್ ನ್ನು ಮ್ಯಾನೆಟ್ ಸಂಸ್ಥೆ ಪುಣೆಯಲ್ಲಿ ಮಾಡಿ, ಪ್ರಸ್ತುತ ಎಂ. ಎಸ್. ಸಿ. ಶಿಪ್ಪಿಂಗ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ