ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸ
ಬೆಂಗಳೂರು: ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ ಹಾಗು ಸಮರ್ಪಣ - ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಈ ನಾಡು ಕಂಡ ಶ್ರೇಷ್ಠ ಮಾನವತಾವಾದಿ , ಸಾವಿರಾರು ಬಡವರಿಗೆ ನ್ಯಾಯದಾನ ಮಾಡಿದ ವಕೀಲರು, ಕನ್ನಡದ ಕೀರ್ತಿಯನ್ನು ಬೆಳಗಿದ ಸಾಹಿತ್ಯ ರತ್ನ ಶ್ರೀ ಅನ್ನದಾನಯ್ಯ ಪುರಾಣಿಕ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು, ಬೆಂ.ವಿವಿ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾದ ಡಾ. ಚಿತ್ತಯ್ಯ ಪೂಜಾರ್ ‘ಕರ್ನಾಟಕ ಸಂಸ್ಕೃತಿಗೆ ವಚನಕಾರರ ಕೊಡುಗೆ’ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತ 12ನೇ ಶತಮಾನದ ವಚನಕಾರರು ಕನ್ನಡ ಭಾಷೆಯನ್ನು ಅತ್ಯಂತ ಸರಳೀಕರಿಸುವ ಮೂಲಕ ಜನ ಸಾಮಾನ್ಯರಲ್ಲಿ ಸಾಹಿತ್ಯಾಭಿರುಚಿ ಮೂಡಿಸುವ ಕಾರ್ಯ ಮಾಡಿದರು,ಪುಸ್ತಕಗಳನ್ನು ಓದುವ ಹವ್ಯಾಸ ಇತ್ತೀಚೆಗೆ ಕಡಿಮೆಯಾಗುತ್ತಿರುವುದು ದುರಾದೃಷ್ಟಕರ. ಸಾಹಿತ್ಯ ಲೋಕಕ್ಕೆ ವಚನಕಾರರು ನೀಡಿದ ಕೊಡುಗೆ ಅಪಾರ. ವಚನ ಸಾಹಿತ್ಯ ಬದುಕಿಗೆ ಅಗತ್ಯವಿರುವ ಎಲ್ಲಾ ಮೌಲ್ಯಗಳನ್ನು ಕಟ್ಟಿಕೊಟ್ಟಿದ್ದಾರೆ . ಸಾಮಾಜಿಕ, ಆರ್ಥಿಕ ಮತ್ತು ಬೌದ್ಧಿಕ ಚಳುವಳಿಗಳು ನಡೆದಿದ್ದು ೧೨ನೇ ಶತಮಾನದಲ್ಲಿ. ಆಕಾಲಕ್ಕೆ ಅನುಭವ ಮಂಟಪ ನಿರ್ಮಾಣವಾಗಿದ್ದು, ವಚನಗಳ ಚರ್ಚೆ ನಡೆಸಲಾಗುತ್ತಿತ್ತು. ಶರಣರು ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದರಲ್ಲದೆ ಅಂದೇ ಆಯ್ದಕ್ಕಿ ಲಕ್ಕಮ್ಮನಂತವರಿAದ ದಾಸೋಹದ ಕಲ್ಪನೆ ಜಾರಿಯಾಗಿತ್ತು ಎಂದು ಅಭಿಪ್ರಾಯ ಪಟ್ಟರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶರವರು ಅಧ್ಯಕ್ಷೀಯ ನುಡಿಗಳಲ್ಲಿ ಹನ್ನೆರಡನೆ ಶತಮಾನ ಧಾರ್ಮಿಕ ಸಿದ್ಧಾಂತಗಳ ತಿಕ್ಕಾಟ, ಆಚಾರ-ವಿಚಾರಗಳ ಆತಂಕ, ಜಾತಿ-ಮತ-ಪಂಥಗಳ ಹೊಡೆದಾಟ. ಇಂತಹ ಸಮಾಜದಲ್ಲಿ ವಚನಕಾರರು ತ್ರಿವಿಧ ದಾಸೋಹಗಳಿಗೆ ಬದ್ಧನಾಗಿ ಇಹಲೋಕದಲ್ಲಿಯೇ, ಆತ್ಮ ಸಾಕ್ಷಾತ್ಕಾರವನ್ನು ಬಗ್ಗೆ ಅರಿವು ಮೂಡಿಸುತ್ತಾರೆ ಎಂದು ತಿಳಿಸಿದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ. ಕೃಷ್ಣ ಮತ್ತು ವಿಶ್ರಾಂತ ಪ್ರಾಂಶುಪಾಲರು ಹಾಗೂ ದತ್ತಿಯ ದಾನಿಗಳಾದ ಪ್ರೊ. ಚಂದ್ರಿಕಾ ಪುರಾಣಿಕ , ದೀಪ್ತಿ ಮತ್ತು ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಸತ್ಯಮಂಗಲ ಮಹಾದೇವ , ಸಮಪಣದ ಜಂಟಿ ಕಾರ್ಯದರ್ಶಿ ಡಾ.ಮಂಜುನಾಥ್ ಎನ್. ,ಕಾಲೇಜಿನ ಪ್ರಾಂಶುಪಾಲ ಪ್ರೋ.ಎನ್.ಎಸ್.ಸತೀಶ್ ಉಪಸ್ಥಿತರಿದ್ದರು
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


