ಸಿದ್ಧಕಟ್ಟೆಯಲ್ಲಿ ನಾಳೆ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

Upayuktha
0


ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿ ಯವರ ಕಚೇರಿ ಬಂಟ್ವಾಳ, ಹಾಗೂ ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆ, ಸಿದ್ದಕಟ್ಟೆ ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಮಟ್ಟದ "ಪ್ರತಿಭಾ ಕಾರಂಜಿ 2023 -24" ನವೆಂಬರ್ 6 ರಂದು ಬಂಟ್ವಾಳ ತಾಲೂಕಿನ ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆ ಸಿದ್ದಕಟ್ಟೆ ಇಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜರಗಲಿದೆ.



ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಸಭೆಯ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಪುತ್ತೂರು ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ, ಕರ್ನಾಟಕ ರಾಜ್ಯ ವಿಧಾನಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಬಿ.ಎಂ ಫಾರೂಕ್, ಹರೀಶ್ ಕುಮಾರ್, ಎಸ್ ಎಲ್ ಭೋಜೆ ಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಬಂಡಾರಿ ಭಾಗವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯರು, ಸಂಘಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬೇಬಿ ಪೂಜಾರಿ, ಸಂಘಬೆಟ್ಟು ಪಂಚಾಯತ್ ಉಪಾಧ್ಯಕ್ಷ ಸುರೇಶ್ ಕುಲಾಲ್, ಕುಕ್ಕಿಪಾಡಿ ಪಂಚಾಯತ್ ಸದಸ್ಯರುಗಳಾದ ದಿನೇಶ್ ಸುಂದರ ಶಾಂತಿ, ಚಂದ್ರ ಕೋರ್ಯಾರು, ಪೂರ್ಣಿಮ ರವಿರಾಜ್, ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಸುನಿಲ್ ಶೆಟ್ಟಿಗಾರ್, ಬಂಟ್ವಾಳ ತಹಶೀಲ್ದಾರ್ ಬಿ.ಎನ್ ಕೂಡಲಗಿ, ಬಂಟ್ವಾಳ ಬಾರ್ ಅಸೋಸಿಯೇಷನ್ ಅಧ್ಯಕ್ಷ ರಿಚರ್ಡ್ ಡಿಕೋಸ್ತ ಮೊದಲಾದವರು ಉಪಸ್ಥಿತರಿರುತ್ತಾರೆ.




ಬಂಟ್ವಾಳ ತಾಲೂಕಿನ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಆಯಾ ಶಾಲಾ ಶಿಕ್ಷಕರು ಕ್ಲಪ್ತ ಸಮಯದಲ್ಲಿ ಹಾಜರಿರುವಂತೆ ನೋಡಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top