ಬೆಂಗಳೂರು: 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಕರ್ನಾಟಕ ವೃತ್ತ ಅಂಚೆ ಪತ್ತಿನ ಸಹಕಾರ ಸಂಘ ನಿಯಮಿತ ಬೆಂಗಳೂರು ಶೇಷಾದ್ರಿಪುರಂ ಸಂಘಕ್ಕೆ ಮೊಟ್ಟ ಮೊದಲ ಬಾರಿಗೆ "ಉತ್ತಮ ಸಹಕಾರ ಸಂಘ" ಪ್ರಶಸ್ತಿ ಬಂದಿರುವ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷ ಜಿ ಜಾನಕಿರಾಮ್, ಮತ್ತು ಕಾರ್ಯದರ್ಶಿ ಶ್ರೀಮತಿ ಬೇಬಿ ಅವರನ್ನು ಹಾಗೂ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಲಾಯಿತು.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಸುಮಾರು 59 ವರ್ಷಗಳಿಂದ ದಿ ಕರ್ನಾಟಕ ವೃತ್ತ ಅಂಚೆ ಪತ್ತಿನ ಸಹಕಾರ ಸಂಘ ನಿಯಮಿತ ಚಟುವಟಿಕೆಗಳನ್ನು ನಡೆಸುತ್ತಿದ್ದು, ಸುಮಾರು 10 ವರ್ಷಗಳ ನಂತರ ಜಿ. ಜಾನಕಿ ರಾಮ್ ಅಧ್ಯಕ್ಷತೆಯಲ್ಲಿ, ನಿರ್ದೇಶಕರು, ಸಿಬ್ಬಂದಿ ವರ್ಗದವರ ಸಹಕಾರದಿಂದ 'ಉತ್ತಮ ಸಹಕಾರ ಸಂಘ' ಎಂಬ ಖ್ಯಾತಿಗೆ ಪಾತ್ರವಾಗಿದೆ.
ಈ ಹಿನ್ನೆಲೆಯಲ್ಲಿ ನ.17ರಂದು ಗದಗ ಜಿಲ್ಲೆ ಕಲಘಟಗಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಂಡಳ ನಿಯಮಿತ, 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಕರ್ನಾಟಕ ವೃತ್ತ ಅಂಚೆ ಪತ್ತಿನ ಸಹಕಾರ ಸಂಘ ನಿಯಮಿತ ಬೆಂಗಳೂರು ಶೇಷಾದ್ರಿಪುರಂ ಸಂಘಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ