ವೆಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗೆ ಕಂಚಿನ ಪದಕ

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‍ರಾಮ್ ಜಗದೀಶ್ ಭಂಡಾರಿ ಇವರು ರಾಜ್ಯ ಮಟ್ಟದ ಜೂನಿಯರ್ ವೆಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕಂಚಿನ ಪದಕವನ್ನು ಗಳಿಸಿಕೊಂಡಿದ್ದಾರೆ. 



ಕರ್ನಾಟಕ ರಾಜ್ಯ ವೆಯ್ಟ್‍ಲಿಫ್ಟಿಂಗ್ ಅಸೋಸಿಯೇಶನ್‍ನ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‍ರಾಮ್ 67ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.



ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್‍ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‍ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top