ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಯಶಸ್ವಿ

Upayuktha
0



ಪುತ್ತೂರು: ನಗರದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ಯಶಸ್ವಿಯಾಗಿ ನಡೆಯುತ್ತಿದ್ದು ಸಾಫ್ಟ್‍ವೇರ್ ಕಂಪೆನಿಗಳಾದ ಯುನಿಕೋರ್ಟ್, ಎಕ್ಸಾಲ್ಕಾ ಟೆಕ್ನಾಲಜೀಸ್, ಇನ್ನೋಸಾಲ್ವ್ ಐಟಿ ಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.



ಕಂಪ್ಯೂಟರ್ ಸೈನ್ಸ್ ಹಾಗೂ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು 12 ವಿದ್ಯಾರ್ಥಿಗಳು ಆಯ್ಕೆಗೊಂಡು ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಚೈತ್ರ.ಬಿ, ರಾಹುಲ್.ಎಚ್.ರಾಜ್, ಸೀಮಂತ್ ಕುಮಾರ್, ನಿವೀತ.ಬಿ, ಶ್ರಾವ್ಯ.ಎಂ, ಮೆಲಿಟಾ ಪಾಯಸ್, ತ್ರಿಶಾ.ಬಿ.ಭಟ್, ಅನನ್ಯ.ಡಿ.ಆರ್, ಅನ್ವಿತಾ ಸಾವಿತ್ರಿ, ಸಮೀಕ್ಷ, ಅರ್ಪಿತಾ.ಸಿ.ಎಲ್ ಮತ್ತು ಯತಿಕಾ.ಎಂ ಆಯ್ಕೆಗೊಂಡ ವಿದ್ಯಾರ್ಥಿಗಳು 



ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಅವಿರತವಾಗಿ ಶ್ರಮಿಸುತ್ತಿದ್ದು, ಇನ್ನೂ ಹೆಚ್ಚಿನ ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top