ಮಂಗಳೂರು: ನಗರದ ಕೆನರಾ ಕಾಲೇಜಿನ 'ವೃತ್ತಿ ಮಾರ್ಗದರ್ಶನ ಕೋಶ'ವು ಉದ್ಯೋಗಕ್ಕೆ ಅರ್ಹರಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾರ್ಯಾಗಾರವನ್ನು ಆಯೋಜಿಸಿತ್ತು.
'ಕಾಲೇಜ್ ಫಾರ್ ಲೀಡರ್ ಶಿಪ್ ಅಂಡ್ ಹೆಚ್ ಆರ್ ಡಿ ' ಇದರ ವತಿಯಿಂದ ಶ್ರೀ ಅನಂತ ಸುಬ್ರಹ್ಮಣ್ಯ ಶರ್ಮ ಅವರು ಸಂಪನ್ಮೂಲ ವ್ಯಕ್ತಿಯಾಗಿ ತರಬೇತು ನೀಡಿದರು. ಉತ್ತಮ ಸಂವಹನ ಕಲೆ, ಡಿಜಿಟಲ್ ಕೌಶಲ್ಯ, ಸಮಸ್ಯೆ ಬಗೆಹರಿಸುವ ಕಲೆ, ಉತ್ತಮ ನಿರ್ಧಾರಗಳನ್ನು ಕೈಗೊಳ್ಳುವ ಕಲೆಗಳನ್ನು ಬೆಳೆಸುವ ಬಗ್ಗೆ ವಿವಿಧ ಚಟುವಟಿಕೆಗಳ ಮೂಲಕ ಹೊಸ ಕೌಶಲಗಳ ಬಗ್ಗೆ ಆಸಕ್ತಿ ಮೂಡಿಸಿದರು.
ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಇದರ ಸಂಯೋಜಕಿ ಶ್ರೀಮತಿ ಪುಷ್ಪಲತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ, ಆಡಳಿತಾಧಿಕಾರಿ ಡಾ. ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಸಹ ಸಂಯೋಜಕಿ ಕು.ಮಧುಶ್ರೀ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ