ರಾಜ್ಯಮಟ್ಟದ ಚೆಸ್ ಪಂದ್ಯಾಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನುಷ್ ರಾಮ್ ಪ್ರಥಮ

Chandrashekhara Kulamarva
0


ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ  ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್  ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ಎಸ್‍ಜಿಎಫ್‍ಐ( ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ) ಗೆ ಆಯ್ಕೆಯಾಗಿದ್ದಾರೆ. 


ಈತನು ಪುತ್ತೂರು ಕರಿಯಾಲದ ದಿನೇಶ್ ಪ್ರಸನ್ನ ಮತ್ತು ಉಮಾ ದಂಪತಿ ಪುತ್ರ. ಒಟ್ಟು 9 ಹಂತದ ಸುತ್ತಿನಲ್ಲಿ ನಡೆದ ಚೆಸ್ ಸ್ಪರ್ಧೆಯಲ್ಲಿ 8.5 ಅಂಕಗಳನ್ನು ಗಳಿಸಿ  ಈ ಮೂಲಕ ರಾಜ್ಯಮಟ್ಟದಲ್ಲೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top