ಮಕ್ಕಳ ದಿನಾಚರಣೆ ಪ್ರಯುಕ್ತ "ಮಕ್ಕಳೊಂದಿಗೆ ಒಂದು ದಿನ ವಿಶೇಷ ಕಾರ್ಯಕ್ರಮ"

Upayuktha
0



ಬಂಟ್ವಾಳ: ಮಕ್ಕಳಲ್ಲಿ ಬೆಳೆಯುವ ಹಂತದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಮೂಡಿಸುವಂತೆ  ಕೆಲಸಗಳಲ್ಲಿ ತೊಡಬೇಕು, ಕೇವಲ ಪಠ್ಯಕ್ಕೆ ಸೀಮಿತವಾದಗ ಆಗ ಅದರಲ್ಲಿ ಏಕತಾನತೆ ಉಂಟಾಗಿ ಆಸಕ್ತಿ  ಕಳೆದುಕೊಳ್ಳುತ್ತಾರೆ. ಆದ್ದರಿಂದ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತನ್ನ ಆಸಕ್ತಿದಾಯಕ ಕ್ಷೇತ್ರದಲ್ಲಿ ಮುಂದುವರಿಯಲು ಅವಕಾಶ ಸಿಕ್ಕಾಗ ಅವರು ಸವ೯ತೋಮುಖ ಬೆಳವಣಿಗೆ ಉಂಟಾಗುತ್ತದೆ ಎಂದು ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನಾ ಒಕ್ಕೂಟ (ರಿ) ಇದರ ಜಿಲ್ಲಾ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಹೇಳಿದರು.


ಇವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ  ಶಾಲೆಯಲ್ಲಿ  ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ "ಮಕ್ಕಳೊಂದಿಗೆ ಒಂದು ದಿನ" ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.


ಬಂಟ್ವಾಳ ತಾಲೂಕು ಕುಲಾಲ ಕುಂಬಾರ ಯುವ ವೇದಿಕೆಯ ಮಹಿಳಾ ಸಂಘಟನಾ ಅಧ್ಯಕ್ಷ ವಿಜಯಶ್ರೀ  ಶಾಲಾ ಪುಟಾಣಿ ವಿದ್ಯಾರ್ಥಿಗಳ ಜೊತೆ ದೀಪ ಬೆಳಗಿಸಿ ನೆಹರುರವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಕ್ಕಳ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.


ನಂತರ ಸಂಘಟನೆಯ ಸದಸ್ಯರುಗಳಿಂದ ಶಾಲಾ ಎಲ್ಲಾ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ವಿವಿದ ರೀತಿಯ ಮನರಂಜನ ಕ್ರೀಡಾಕೂಟಗಳನ್ನು ನಡೆಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಈ ವರ್ಷದಲ್ಲಿ ಜಿಲ್ಲಾ ಮಟ್ಟದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನಾ ಒಕ್ಕೂಟವನ್ನು ಶಾಲಾ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು, ಕಾರ್ಯಕ್ರಮದ ನಿಮಿತ್ತ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ, ಶಿಕ್ಷಕರುಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಮಾತನಾಡಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಂತರ ಮೊದಲ ಕಾರ್ಯಕ್ರಮ ಮಾಡಲು ಮಜಿ ಶಾಲೆಯನ್ನು ಆಯ್ಕೆ ಮಾಡಿದ್ದಕ್ಕಾಗಿ ಸಂಘಟನೆಗೆ ಅಭಿನಂದಿಸಿ ಶಾಲಾ ಪರವಾಗಿ ಬೇಡಿಕೆಯ ಮನವಿ ಪತ್ರವನ್ನು ಸಂಘಟನೆಯ ಬಂಟ್ವಾಳ ತಾಲೂಕು ಅಧ್ಯಕ್ಷರಿಗೆ ನೀಡಿ ಸಂಘಟನೆಯೂ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮ ಮಾಡಿ ರಾಜ್ಯ ಪ್ರಶಸ್ತಿಯನ್ನು ಪಡೆಯುವಂತಾಗಲಿ ಎಂದರು.


ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಅಧ್ಯಕ್ಷ ನಿತೇಶ್ ಪಲ್ಲಿಕಂಡ, ಗೌರವಾಧ್ಯಕ್ಷ ನಾರಾಯಣ ಬಂಟ್ವಾಳ, ಮಹಿಳಾ ಅಧ್ಯಕ್ಷ ವಿಜಯಶ್ರೀ, ವಿಭಾಗಿಯ ಕೋಶಾಧಿಕಾರಿ ವಿಠಲ ಪಲ್ಲಿಕಂಡ, ಜೊತೆ ಕಾರ್ಯದರ್ಶಿ ಪುನೀತ್ ಕಾಮಾಜೆ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ವಿಶ್ವನಾಥ್ ಮೂಲ್ಯ, ಶಾಲಾ ನಾಯಕಿ ತ್ರಿಷಾ ಮೊದಲಾದವರು ಉಪಸ್ಥಿತರಿದ್ದರು.


ಶಾಲಾ ಮಕ್ಕಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿ, ಸಂಘಟನೆಯ ಕಾರ್ಯದರ್ಶಿ ಕಾರ್ತಿಕ್ ಬಂಟ್ವಾಳ ವಂದಿಸಿದರು. ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು. ಮಕ್ಕಳಿಗೆ ಹಾಗೂ ಸೇರಿದ ಸದಸ್ಯರುಗಳಿಗೆ ಸಿಹಿ ಊಟ ನೀಡಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top