ಬಂಟ್ವಾಳ: ಬಂಟ್ವಾಳ ತಾಲೂಕಿನ ಮುಡಿಪು ಶ್ರೀ ಭಾರತಿ ಶಾಲೆಯ ಅಮೃತ ಮಹೋತ್ಸವದಲ್ಲಿ ನಡೆದ ಭಾರತಿ ಚುಟುಕು ಸಾಹಿತ್ಯ ಗೋಷ್ಠಿಯ ಸಂದರ್ಭದಲ್ಲಿ ಅದೇ ಶಾಲೆಯ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ನಾರಾಯಣಯ್ಯ ಮೂಳೂರು ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹರೀಶ ಸುಲಾಯ ಒಡ್ಡಂಬೆಟ್ಟು ಅವರು ನಾರಾಯಣಯ್ಯ ಮೂಳೂರು ಅವರಿಗೆ ಶಾಲು ಹೊದಿಸುವ ಮೂಲಕ ಅವರನ್ನು ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಘೋಷಣೆ ಮಾಡಿದರು.
ದ.ಕ. ಜಿಲ್ಲಾ ಚುಸಾಪ ಗೌರವಾಧ್ಯಕ್ಷರಾದ ಇರಾ ನೇಮು ಪೂಜಾರಿ ಮತ್ತು ಶ್ರೀ ಭಾರತೀ ಶಾಲೆಯ ಸಂಚಾಲಕರಾದ ಸುಬ್ರಹ್ಮಣ್ಯ ಭಟ್ ಅವರು ನಾರಾಯಣಯ್ಯ ಅವರಿಗೆ ಹೂ ಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಚುಸಾಪ ಅಧ್ಯಕ್ಷರಾದ ಗೋಪಾಲಕೃಷ್ಣ ಶಾಸ್ತ್ರಿಯವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ