ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 30 ದಿನಗಳ ಔದ್ಯೋಗಿಕ, ಕೌಶಲಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಇವರು ಅಧ್ಯಕ್ಷತೆ ವಹಿಸಿದ್ದರು. ಅವರು ವಿದ್ಯಾರ್ಥಿಗಳಿಗೆ ಇಂತಹ ತರಬೇತಿಗಳು ಭವಿಷ್ಯದಲ್ಲಿ ತಮ್ಮ ವೃತ್ತಿ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಉನ್ನತಿ ಸಂಸ್ಥೆಯು ಹಲವಾರು ವರ್ಷಗಳಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಇಂತಹ ತರಬೇತಿಯನ್ನು ಕೊಡುತ್ತಿವೆ. ಇದು ಆರಂಭ ಅಪ್ಟೇ, ವಿದ್ಯಾರ್ಥಿಗಳು ಇದನ್ನು ಮುಂದುವರಿಸಬೇಕು ಎಂದರು.
ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ದಿನೇಶ್ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ತರಬೇತಿಯು ಸ್ಪೋಕನ್ ಇಂಗ್ಲೀಷ್, ನಾಯಕತ್ವ ತರಬೇತಿ, ಸಂವಹನ ಕಲೆ, ಜೀವನ ಕೌಶಲ, ಸಂದರ್ಶನ ಎದುರಿಸುವ ಕಲೆ, ಸಮಯ ನಿರ್ವಹಣೆ, ಸಮೂಹ ಚರ್ಚೆ, ಭಾಷಣ ಕಲೆ, ವೃತ್ತಿ ಜೀವನಕ್ಕೆ ತಯಾರಿ ಮುಂತಾದ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಖಾತರಿಯನ್ನು ಉನ್ನತಿ ಯುನೆಕ್ಟ್ಸ್ ತರಬೇತಿ ಸಂಸ್ಥೆಯ ವತಿಯಿಂದ ನೀಡಲಾಗುತ್ತದೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ತರಬೇತಿ ಪಡೆದ ಇ-ಸರ್ಟಿಫಿಕೇಟ್‍ಗಳನ್ನು ನೀಡಲಾಯಿತು.
ಉನ್ನತಿ ಯುನೆಕ್ಟ್ಸ್ ಸಂಸ್ಥೆಯ ತರಬೇತುದಾರರಾದ ಗುರುಪ್ರಸಾದ್ ಭಟ್, ಶೈಕ್ಷಣಿಕ ಸಂಚಾಲಕರಾದ ಡಾ. ಪ್ರಸಾದ್ ರಾವ್ ಎಂ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಉಮೇಶ್ ಪೈ, ಇತರ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿ ಶಾಕಿತಾ ಸ್ವಾಗತಿಸಿ, ಸುಮಾ ಧನ್ಯವಾದ ಸಮರ್ಪಸಿದರು. ನಿತೀಶ್ ಮತ್ತು ಸ್ಪೂರ್ತಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


