ಕುಂದಾಪುರ: ಸಂವಿಧಾನವನ್ನು ನಮ್ಮ ಜಾತಿ ಧರ್ಮ ಸಮುದಾಯದ ಪ್ರಾದೇಶಿಕತೆಯ ಹಿನ್ನೆಲೆಯಲ್ಲಿ ನೇೂಡುವುದು ರಾಷ್ಟ್ರೀಯತೆಯ ದೃಷ್ಟಿಯಿಂದ ಹಿತಕರವಲ್ಲ. ಭಾರತೀಯ ಸಂವಿಧಾನವನ್ನು ವಿಶಾಲ ದೃಷ್ಟಿಯಿಂದ ನೋಡುವ ಅನಿವಾರ್ಯತೆ ಇದೆ. ನೆಲದ ಶ್ರೇಷ್ಠ ಕಾನೂನಾದ ಸಂವಿಧಾನವು ಸರ್ವರ ಏಳಿಗೆಯನ್ನು ಪ್ರತಿಬಿಂಬಿಸುವ ಪವಿತ್ರವಾದ ಗ್ರಂಥ" ಎಂದು ಅಂಕಣಕಾರ ಪ್ರೊ.ಕೊಕ್ಕರ್ಣೆ ಸುರೇಂದ್ರ ನಾಥ ಶೆಟ್ಟಿ ಅಭಿಪ್ರಾಯಿಸಿದರು.
ಕುಂದಾಪುರ ಭಂಡಾರ್ಕರ್ ಕಾಲೇಜಿನ ರಾಜ್ಯ ಶಾಸ್ತ್ರ ಮತ್ತು ಐ.ಕ್ಯೂ.ಎ.ಸಿ. ಇದರ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಭಾರತ ಸಂವಿಧಾನ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಡಾ. ಶುಭಕರಾಚಾರಿ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ. ಗೊಂಡ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ಪ್ರೊ.ಸತ್ಯನಾರಾಯಣ; ನ್ಯಾಕ್ ಸಂಯೇೂಜನಾಧಿಕಾರಿ ಡಾ.ವಿಜಯಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಹರ್ಷಿತಾ ಪ್ರತಿಜ್ಞಾ ವಿಧಿ ಬೇೂಧಿಸಿ ವಂದಿಸಿದರು. ಉಪನ್ಯಾಸಕಿ ಕಾವ್ಯ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ