ಯಕ್ಷಗಾನ ತಾಳಮದ್ದಳೆ ಸಪ್ತಾಹ ಕರೆಯೋಲೆ ಬಿಡುಗಡೆ
ಮಂಗಳೂರು: 'ಕರ್ನಾಟಕದಲ್ಲಿ ಪರಿಶುದ್ಧವಾದ ಕನ್ನಡ ಭಾಷೆಯನ್ನು ಬಳಸುವ ಒಂದು ಕಲಾಪ್ರಕಾರವಿದ್ದರೆ ಅದು ಯಕ್ಷಗಾನ ಮಾತ್ರ. ಕಳೆದ ಹತ್ತು ವರ್ಷಗಳಿಂದ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಪ್ರತಿ ನವೆಂಬರ್ ತಿಂಗಳಲ್ಲಿ ನಡೆಸುತ್ತಿರುವ ಯಕ್ಷಗಾನ ತಾಳಮದ್ದಳೆಯ ನುಡಿ ಹಬ್ಬ ಕನ್ನಡ ಜನತೆಗೆ ಯಕ್ಷಾಂಗಣದ ಮಹೋನ್ನತ ಕೊಡುಗೆ. ಅದಕ್ಕಾಗಿ ಈ ಬಾರಿ ಹನ್ನೊಂದನೇ ಸಪ್ತಾಹವು ಕಲಾಭಿಮಾನಿಗಳ ಪ್ರೋತ್ಸಾಹದಿಂದ ಯಶಸ್ವಿಯಾಗಲಿ' ಎಂದು ಯಕ್ಷಾಂಗಣದ ಗೌರವಾಧ್ಯಕ್ಷ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ ಹೇಳಿದ್ದಾರೆ
ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ - ಮಂಥನ ಮತ್ತು ಪ್ರದರ್ಶನ ವೇದಿಕೆಯು ನವೆಂಬರ್ 19 ರಿಂದ 25 ರವರೆಗೆ ಮಂಗಳೂರಿನಲ್ಲಿ ಆಯೋಜಿಸಿದ 'ಯಕ್ಷಗಾನ ತಾಳಮದ್ದಳೆ ಸಪ್ತಾಹ - 2023: ಶ್ರೀಹರಿ ಚರಿತ್ರೆ' ಸರಣಿಯ ಕರೆಯೋಲೆಯನ್ನು ಕದ್ರಿ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಮಹೇಶ್ ಮೋಟರ್ಸ್ ಮಾಲಕ ಎ.ಕೆ.ಜಯರಾಮ ಶೇಖ ಶುಭ ಹಾರೈಸಿದರು.
ಯಶಸ್ಸಿಗೆ ಪ್ರಾರ್ಥನೆ: ಬಳಿಕ ದೇವರ ಮುಂದೆ ಆಮಂತ್ರಣ ಪತ್ರಿಕೆಯನ್ನಿರಿಸಿ ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ವಂದಿಸಿದರು.
ಉಪಾಧ್ಯಕ್ಷರುಗಳಾದ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಕೆ.ರವೀಂದ್ರ ರೈ ಕಲ್ಲಿಮಾರು; ಕಾರ್ಯದರ್ಶಿ ಉಮೇಶ ಆಚಾರ್ಯ ಗೇರುಕಟ್ಟೆ, ಪದಾಧಿಕಾರಿಗಳಾದ ಕರುಣಾಕರ ಶೆಟ್ಟಿ ಪಣಿಯೂರು, ನಿವೇದಿತಾ ಎನ್. ಶೆಟ್ಟಿ, ಸುಮಾ ಪ್ರಸಾದ್ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ