ಉಜಿರೆ: ಇತ್ತೀಚೆಗೆ ಸಮಾಜ ವಿಜ್ಞಾನ ವಿಷಯದ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಳ್ಳುವುದು ಕಡಿಮೆಯಾಗಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಅದಕ್ಕಾಗಿ ಎಲ್ಲಾ ವಿಷಯಗಳ ಬಗ್ಗೆ ಅರಿವು ಹೊಂದಬೇಕು ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಸೆಂಟರ್ ಫಾರ್ ಎಕಾನಮಿಕ್ ಸ್ಟಡೀಸ್ & ಪ್ಲ್ಯಾನಿಂಗ್, ಸ್ಕೂಲ್ ಆಫ್ ಸೋಶಲ್ ಸೈನ್ಸಸ್ ವಿಭಾಗದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ. ರಮೇಶ್ ಸಾಲಿಯಾನ್ ಹೇಳಿದರು.
ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗವು 'ಸ್ಕಿಲ್ ಗ್ಯಾಪ್ಸ್ ಇನ್ ಸೋಶಲ್ ಸೈನ್ಸ್ ಎಜುಕೇಶನ್' ಕುರಿತು ನ. 7 ರಂದು ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿ ಮುಖ್ಯ. ಆ ಬಗ್ಗೆ ಗಮನ ಹರಿಸಬೇಕು. ಕೇವಲ ಅರ್ಥಶಾಸ್ತ್ರ ವಿಷಯದ ಬಗ್ಗೆ ಮಾತ್ರ ಗಮನ ಹರಿಸದೆ ಎಲ್ಲಾ ವಿಷಯಗಳನ್ನು ಓದಿ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಪ್ರದೇಶ ಬಿಟ್ಟು ಹೊರಬರಬೇಕು. ದೇಶ ಸುತ್ತಬೇಕು. ದೆಹಲಿ ಜೆ.ಎನ್.ಯು.ಗೆ ಕರ್ನಾಟಕದಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆಯಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ಅರ್ಥಶಾಸ್ತ್ರ ವಿಭಾಗವು ಸದಾ ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಕ್ರಿಯಾಶೀಲವಾಗಿದೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಅತಿಥಿಯನ್ನು ಗೌರವಿಸಲಾಯಿತು. ಪ್ರಾಧ್ಯಾಪಕರಾದ ಡಾ. ನಾಗರಾಜ್ ಪೂಜಾರಿ ಹಾಗೂ ಅಭಿನಂದನ್ ಕೆ.ಸಿ. ಜೈನ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗಣರಾಜ್ ಕೆ. ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಡಾ. ಮಹೇಶ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ