ಸಿರಿ ಸಂಸ್ಥೆಯ ಎಂ.ಡಿ.ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’

Upayuktha
0

ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ



ಉಜಿರೆ: ಉದ್ಯಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಉನ್ನತ ಸಾಧನೆಯನ್ನು ಗುರುತಿಸಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಯುತ ಕೆ.ಎನ್.ಜನಾರ್ಧನರವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.


ಈ ನಿಟ್ಟಿನಲ್ಲಿ ಸಿರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ವತಿಯಿಂದ ಸಿರಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಯುತ ಕೆ.ಎನ್.ಜನಾರ್ಧನ ರವರಿಗೆ ಅಭಿನಂದನಾ ಕಾರ್ಯಕ್ರಮ ಶುಕ್ರವಾರದಂದು ಉಜಿರೆ ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು.


ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಪ್ರಸನ್ನ ಯು ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಪೂಜ್ಯರು ಹಾಗೂ ಮಾತೃಶ್ರೀ ಅಮ್ಮನವರ ಆಶ್ರಯದಲ್ಲಿ ಸ್ತೀ ಸಬಲೀಕರಣದ ಧ್ಯೇಯೋದ್ದೇಶದೊಂದಿಗೆ ಉದ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಲು ಉತ್ತಮ ಸಲಹೆ, ಮಾರ್ಗದರ್ಶನವನ್ನು ನೀಡುವ ಮೂಲಕ ಸಿರಿ ಸಂಸ್ಥೆಯನ್ನು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲು ಕಾರಣೀಕರ್ತರಾದ ಸಿರಿ ಎಂ.ಡಿ ಶ್ರೀಯುತ ಕೆ.ಎನ್.ಜನಾರ್ಧನ ರವರಿಗೆ ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಪ್ರೀತಿಪೂರ್ವಕವಾಗಿ ಗೌರವಿಸಿ, ಅಭಿನಂದನೆ ಸಲ್ಲಿಸಿದರು.


ಸಿರಿ ಎಂ.ಡಿ ಶ್ರೀಯುತ ಕೆ.ಎನ್.ಜನಾರ್ಧನ ರವರು ಸಿರಿ ಸಂಸ್ಥೆಯು ಈ ಉನ್ನತ ಸಾಧನೆಯನ್ನು ಮಾಡುವಲ್ಲಿ ಶ್ರಮಿಸಿರುವ ಎಲ್ಲಾ ಸಿರಿ ಸಿಬ್ಬಂದಿಗಳಿಗೆ ಆಭಾರ ವ್ಯಕ್ತಪಡಿಸಿದರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಪೂಜ್ಯರು ದಯಪಾಲಿಸಿದ ದೀಪೋತ್ಸವ ಉಡುಗೊರೆಯನ್ನು ವಿತರಿಸಿ, ಶುಭ ಹಾರೈಸಿದರು.


ಕಾರ್ಯಕ್ರಮದ ಕೊನೆಯಲ್ಲಿ ಸಿರಿ ಗೋದಾಮು ಪ್ರಬಂದಕರಾದ ಶ್ರೀ ಜೀವನ್ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು. ಎಲ್ಲಾ ಸಿರಿ ಸಿಬ್ಬಂದಿಗಳು ಸಿರಿ ಎಂ.ಡಿ ಯವರನ್ನು ಅಭಿನಂದಿಸಿ, ಸಂಭ್ರಮಪಟ್ಟರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top