ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Upayuktha
0



ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಯಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.



ಕಾರ್ಯಕ್ರಮವನ್ನು ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯಚಂದ್ರ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ನಾರಾಯಣ ಫಡ್ಕೆಯವರು ದೀಪಾವಳಿ ಹಬ್ಬದ ಹಿನ್ನೆಲೆ, ಮಹತ್ವವನ್ನು ವಿವರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಭಕ್ತಿ ಗೀತೆಗಳು, ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.



ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಕನ್ನಡ ಮಾಧ್ಯಮ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು, ಭೋದಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಊರಿನ ಹಿರಿಯರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter      


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top