ಡಿಜಿಟಲ್ ಯುಗದಲ್ಲೂ ಪುಸ್ತಕಗಳ ಮಹತ್ವ ಕಡಿಮೆಯಾಗಿಲ್ಲ: ರೂಪೇಶ್ ಶೆಟ್ಟಿ

Upayuktha
0



ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟಕರಾಗಿ ಭಾಗವಹಿಸಿದ ಚಿತ್ರದುರ್ಗ ಇಂಡಿಯಾನಾ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ರೂಪೇಶ್ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಭಿನ್ನ ಯೋಚನೆ ಮತ್ತು ವಿರಳವಾಗಿ ಕ್ರಮಿಸಿದ ಮಾರ್ಗವನ್ನು ಆಯ್ಕೆ ಮಾಡಿಕೊಂಡಲ್ಲಿ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಈ ನಿಟ್ಟಿನಲ್ಲಿ ಓದುವ ಹವ್ಯಾಸ ನಮ್ಮಲ್ಲಿ ಸೃಜನಶೀಲ ಆಲೋಚನೆಗಳನ್ನು ಹುಟ್ಟುಹಾಕಬಲ್ಲದು. ಅದೆಷ್ಟೊ ಆದರ್ಶ ವ್ಯಕ್ತಿಗಳಲ್ಲಿ ಒಂದು ಪುಸ್ತಕದ ಓದು ಬದುಕಿನ ದಿಕ್ಕನ್ನೇ ಬದಲಾಯಿಸಿದ ಉದಾಹರಣೆಗಳಿವೆ. ಜೊತೆಗೆ ಇಂದಿನ ಡಿಜಿಟಲ್ ಯುಗದಲ್ಲೂ ಪುಸ್ತಕಗಳ ಮಹತ್ವ ಮೌಲ್ಯವೇನೂ ಕಡಿಮೆಯಾಗಿಲ್ಲ ಎಂದರು. 



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಇವರು ಯುವಜನತೆಯಲ್ಲಿ ಸ್ವತಂತ್ರ ಚಿಂತನೆ ಕ್ಷೀಣಿಸುತ್ತಿರುವ ಇಂದಿನ ದಿನಗಳಲ್ಲಿ ಮತ್ತೆ ಯುವಜನತೆಯಲ್ಲಿ ಕ್ರಿಯಾಶೀಲತೆ, ಮಾನವೀಯತೆ ಮತ್ತು ಸೃಜನಶೀಲತೆಯನ್ನು ತರುವಲ್ಲಿ ಪುಸ್ತಕ ಪ್ರೀತಿ ಸಹಕಾರಿ ಎಂದರು. 



ಕಾಲೇಜಿನ ಐಕ್ಯುಎಸಿ ಸಂಚಾಲಕಿ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಘಟಿಸಿದ ಗ್ರಂಥಪಾಲಕ ಕೃಷ್ಣ ಸಾಸ್ತಾನ ಗ್ರಂಥಾಲಯ ಸಪ್ತಾಹದ ಅಂಗವಾಗಿ ಪುಸ್ತಕ ಪ್ರದರ್ಶನ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಪದಜೊಡಣೆ ಹಾಗೂ ಪುಸ್ತಕ ಓದು–ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆಯೆಂದ ತಿಳಿಸಿದರು. 



ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ  ನೀಲಾವರ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರೂಪೇಶ್ ಶೆಟ್ಟಿಯವರು ಗ್ರಂಥಾಲಯಕ್ಕೆ ಕಂಪ್ಯೂಟರ್ ದೇಣಿಗೆಯಾಗಿ ನೀಡಿದರು. ಗ್ರಂಥಾಲಯ ಸಹಾಯಕಿಯರಾದ ಶ್ರೀಮತಿ ಸುನೀತಾ ಮತ್ತು ಶ್ರೀಮತಿ ಪ್ರಮೀಳಾ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top