ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. 4x400 ರಿಲೇ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್, ನಿಹಾಲ್ ರಾಜ್, ದ್ವಿತೀಯ ವಿಜ್ಞಾನ ವಿಭಾಗದ ಪ್ರಮಥ್ ರೈ, ಧನುಷ್ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.
ಪ್ರಥಮ ಪಿಯುಸಿ ಕಲಾವಿಭಾಗದ ನಿಶಾ 400 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡು ಅಮೋಘ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ