ಸ್ಕೌಟ್ಸ್ ಮಕ್ಕಳಿಗೆ ಸಮವಸ್ತ್ರ ಕೊಡುಗೆ

Upayuktha
0


ಕಲ್ಲಡ್ಕ: ಮಕ್ಕಳು ಕೇವಲ ಪಠ್ಯಕ್ಕೆ ಸಂಬಂಧಿಸಿದಂತೆ ಕಲಿಕೆ ಮಾಡುವ ಜೊತೆಗೆ ಪಠ್ಯೇತರವಾಗಿ ಸ್ಕೌಟ್ಸ್ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಜೀವನ ಕೌಶಲಗಳ ಬಗ್ಗೆ ಅನುಭವವನ್ನು ಪಡೆಯುತ್ತಾರೆ. ಇಂತಹ ಕಲಿಕೆಯು ಭದ್ರವಾಗಿ ಸೇವಾಪರತೆಯನ್ನು ಬೆಳೆಸುತ್ತದೆ, ಈ ರೀತಿಯ ಕಲಿಕೆಯು ಬೆಳೆಯಲು ಸ್ಕೌಟ್ ಸಂಸ್ಥೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಪೂಜಾರಿಯವರು ಬಂಟ್ವಾಳ ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಸ್ಕೌಟ್ ಮಕ್ಕಳಿಗೆ ಒದಗಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.


ಇದರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಲು ಉಚಿತ ಸಮವಸ್ತ್ರವನ್ನು ವಿತರಿಸಿ ಮಾತನಾಡಿದರು. ಅವರು ತಮ್ಮ ಪಂಚಾಯತಿನ ಉಪಾಧ್ಯಕ್ಷ ಸ್ಥಾನದ ಪದಗ್ರಹಣ ಕಾರ್ಯಕ್ರಮವನ್ನು ಸರಳವಾಗಿ ಮಾಡಿ ಅದಕ್ಕಾಗುವ ಖರ್ಚನ್ನು ಶಾಲಾ ಮಕ್ಕಳ ಸೇವೆಗೆ ನೀಡಿರುವುದು ಪ್ರಸಂಶನೀಯವಾಗಿದೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ,ಶಾಲಾ ಸ್ಕೌಟ್ ಕ್ಯಾಪ್ಟನ್ ಶಿಕ್ಷಕಿ ಸಂಗೀತ ಶರ್ಮ ಪಿ ಜಿ, ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top