
ಸುರತ್ಕಲ್: ಡೆಲ್ಲಿ ಪಬ್ಲಿಕ್ ಸ್ಕೂಲ್ ಹಳೇ ವಿದ್ಯಾರ್ಥಿ ಹಾಗೂ ಸ್ಥಳೀಯವಾಗಿ ವಿದ್ಯಾಭ್ಯಾಸ ಮಾಡಿ ಸೈನ್ಯಕ್ಕೆ ಸೇರಿ ದೇಶ ಸೇವೆಯ ಸಂದರ್ಭದಲ್ಲಿ ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ವೀರಮರಣವನ್ನಪ್ಪಿದ ಕ್ಯಾ.ಪ್ರಾಂಜಲ್ ಅವರ ಹೆಸರನ್ನು ಗಣೇಶಪುರ ಕಾಟಿಪಳ್ಳ ಸುರತ್ಕಲ್ ವರ್ತುಲ ರಸ್ತೆಗೆ ನಾಮಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
ಕ್ಯಾ. ಪ್ರಾಂಜಲ್ ಸುಮಾರು 20 ವರ್ಷ ಸ್ಥಳೀಯವಾಗಿ ಬೆಳೆದಿದ್ದು ಇಲ್ಲಿರುವಾಗಲೇ ಸೈನ್ಯ ಸೇರಿ ನಮ್ಮ ಊರಿಗೆ ಕೀರ್ತಿ ತಂದಿದ್ದು, ಇದೀಗ ದೇಶಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಇವರ ಹೆಸರು ನಿತ್ಯ ಜನರ ಮನದಲ್ಲಿ ಅಚ್ಚಳಿಯದೆ ಉಳಿಯುವಂತಾಗಲು ಈ ಕ್ರಮ ಕೈಗೊಳ್ಳಲು ಮಂಗಳೂರು ಪಾಲಿಕೆಗೆ ಪತ್ರ ಬರೆದು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ