ಪಣಜಿ: ಗೋವಾ ಮಾಪ್ಸಾದ ಬಿಜೆಪಿ ಕಛೇರಿಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗೋವಾದ ಮಯೆಮ್ ಶಾಸಕ ಪ್ರೆಮೇಂದ್ರ ಶೇಟ್, ದಕ್ಷಿಣ ಭಾರತ ಬಿಜೆಪಿ ಸೆಲ್ ಅಧ್ಯಕ್ಷ ರಾಕೇಶ್ ಅಗರವಾಲ, ಗೋವಾ ಬಿಜೆಪಿ ಕರ್ನಾಟಕ ಸೆಲ್ ಅಧ್ಯಕ್ಷರಾದ ಮುರಳಿ ಮೋಹನ್ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗೋವಾ ಬಿಜೆಪಿ ಕರ್ನಾಟಕ ಸೆಲ್ ಉತ್ತರ ಗೋವಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ, ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಗಿರಿರಾಜ್ ಭಂಡಾರಕಾರ್, ದಕ್ಷಿಣ ಗೋವಾ ಬಿಜೆಪಿ ಸಂಘಟನೆಯ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ಉತ್ತರ ಗೋವಾ ಬಿಜೆಪಿ ಸಂಘಟನೆಯ ಕಾರ್ಯದರ್ಶಿ ಶಂಭು ಶೆಟ್ಟರ್, ಮತ್ತಿತರರು ಉಪಸ್ಥಿತರಿದ್ದರು.
ಗೋವಾದ ಬಿಜೆಪಿ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಗೆ ಹಾಗೂ ರಾಜ್ಯ ಸಭಾ ಸದಸ್ಯ ಸದಾನಂದ ಶೇಟ್ ತಾನಾವಡೆ ರವರಿಗೆ ಗೋವಾ ಬಿಜೆಪಿ ಕರ್ನಾಟಕ ಸೆಲ್ ವತಿಯಿಂದ ಅಧ್ಯಕ್ಷರಾದ ಮುರಳಿ ಮೋಹನ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


