ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹೆಚ್.ಎಸ್. ಪ್ರತಿಮಾ ಹಾಸನ್

Upayuktha
0


ಹಾಸನ: ಮಂದಗೆರೆ ಕಲೆ-ಸಾಹಿತ್ಯ- ಸಾಂಸ್ಕೃತಿಕ ವೇದಿಕೆ, ಮತ್ತು ಮಂದಗೆರೆ ಮಾಧ್ಯಮ ಸಂಪರ್ಕ ಕೇಂದ್ರ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್. ಎಸ್. ಪ್ರತಿಮಾ ಹಾಸನ್ ರವರನ್ನು ಆಯ್ಕೆ ಮಾಡಲಾಗಿದ್ದು, ಅವರನ್ನು ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.


ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಸಂಸ್ಥಾಪಕಿ ಹೆಚ್. ಎಸ್. ಪ್ರತಿಮಾ ಹಾಸನ್ ರವರು ವೃತ್ತಿಯಲ್ಲಿ ಶಿಕ್ಷಕಿ, ಪ್ರವೃತ್ತಿಯಲ್ಲಿ ಸಾಹಿತಿ, ಮತ್ತು ಕನಸಿನ ಭಾರತ  ಪತ್ರಿಕೆಯ ಜಿಲ್ಲಾ ವರದಿಗಾರ್ತಿಯಾಗಿ ಸಮಾಜ ಸೇವಕಿಯಾಗಿ, ಅಂಕಣಗಾರ್ತಿಯಾಗಿ, ಹಲವಾರು ಸಂಸ್ಥೆಗಳಲ್ಲಿ ಸಂಘಗಳಲ್ಲಿ ಜಿಲ್ಲಾಧ್ಯಕ್ಷರಾಗಿ, ಮಹಿಳಾ ಹೋರಾಟಗಾರ್ತಿಯಾಗಿ, ಗಾಯಕಿಯಾಗಿ, ವೃದ್ಧಾಶ್ರಮದಲ್ಲಿ ಕಾರ್ಯಕರ್ತೆಯಾಗಿ, ಬಾಲ ಮಂದಿರಗಳಲ್ಲಿನ ಸೇವೆ ಮತ್ತು ಎಲ್ಲಾ ಕ್ಷೇತ್ರಗಳಲ್ಲೂ ತನ್ನದೇ ಆದಂತಹ ಸೇವೆಯನ್ನು ನಿಷ್ಕಲ್ಮಶವಾಗಿ ಮಾಡುತ್ತಿರುವ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಹೆಚ್ಎಸ್ ಪ್ರತಿಮಾ ಹಾಸನ್ ರವರು ಕನ್ನಡದ ಬಗೆಗೆ ಕವನ ವಾಚನವನ್ನು ಮಾಡಿ, ಮೆಚ್ಚುಗೆ ಪಡೆದರು.  ಪ್ರಶಸ್ತಿಯನ್ನು ಪಡೆದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಮಂದಗೆರೆ ರಾಜಕುಮಾರ್, ಹಾಸನದ ಸುಮಾ ರಮೇಶ್, ಅನಿತ ಪಿ. ಕೆ. ಮತ್ತು ಚಂಪಾ ಚಿನಿವಾರ್, ಕರುನಾಡ ಟಿ.ವಿ. ಯ ಮೊಹಮ್ಮದ್ ಹನಿಫ್, ಗೌರವಧ್ಯಕ್ಷ ಡಾ. ಅಂಬರೀಶ್ ಜೀ ಇನ್ನೂ ಹಲವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top