ನ.11ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಇಸ್ರೋ ವಿಕ್ರಮ ಕಾರ್ಯಕ್ರಮ

Upayuktha
0



ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ಪುತ್ತೂರು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ಇಸ್ರೋ ವಿಕ್ರಮ ಕಾರ್ಯಕ್ರಮವು ನವೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. 



ಸಂಪನ್ಮೂಲ ವ್ಯಕ್ತಿಯಾಗಿ ಭಾರತೀಯ ಇಸ್ರೋ ಸಂಸ್ಥೆಯ ಎಲ್‍ಪಿಎಸ್‍ಸಿಯ ಜನರಲ್ ಮ್ಯಾನೇಜರ್ ಕೃಷ್ಣಮೋಹನ್ ಶಾನ್‍ಭಾಗ್ ಮತ್ತು ಇಸ್ರೋ ಸಂಸ್ಥೆಯ ಉಪನಿರ್ದೇಶಕ ಶಂಭಯ್ಯ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಬೆಳಿಗ್ಗೆ 9.30 ರಿಂದ 11 ಗಂಟೆವರೆಗೆ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತು 11.15 ರಿಂದ 12.45 ವರೆಗೆ ಪುತ್ತೂರು ತಾಲೂಕಿನ ಮತ್ತು ಆಸುಪಾಸಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಚಂದ್ರಯಾನ 3- ಆದಿತ್ಯ ಎಲ್-1 ವಿಕ್ರಮ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ.




ಕೃಷ್ಣಮೋಹನ್ ಶಾನ್‍ಭಾಗ್ ರವರು ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾಥಿಯಾಗಿದ್ದು ಚಂದ್ರಯಾನ-3 ರ ಯಶಸ್ವಿ ಉಡ್ಡಯಾನದಲ್ಲಿ , ಸೂರ್ಯಯಾನದ ಯಶಸ್ವಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. 




ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ರಾವ್ , ಕಾರ್ಯದರ್ಶಿ ಡಾ. ಮನಮೋಹನ ಎಂ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಗೋಪಾಲಕೃಷ್ಣ ಭಟ್ , ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9844665385 ಅಥವಾ 08251 237455 ಸಂಪರ್ಕಿಸಬಹುದು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top