'ಗೋವಾ ಕನ್ನಡಿಗರು ದಿನಕ್ಕೊಂದು ರೂ ತೆಗೆದಿಟ್ಟರೆ ಭವ್ಯ ಕನ್ನಡ ಭವನ ನಿರ್ಮಾಣ ಸಾಧ್ಯ'

Upayuktha
0


ಪಣಜಿ: ಗೋವಾ ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದಾರೆ. ಕನ್ನಡಿಗರೆಲ್ಲರೂ ಪ್ರತಿದಿನ ಒಂದು ರೂಪಾಯಿ ತೆಗೆದು ಇಟ್ಟರೆ ಕರ್ನಾಟಕದಲ್ಲಿ ನಿರ್ಮಾಣವಾಗದಂತಹ ದೊಡ್ಡ ಕನ್ನಡ ಭವನ ನಿರ್ಮಾಣ ಮಾಡಲು ಸಾಧ್ಯ ಎಂದು ಗೋಕಾಕದ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ನುಡಿದರು.



ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ ಘಟಕ, ಕನ್ನಡ ಸಾಹಿತ್ಯ ಪರಿಷತ್ತು ಪಣಜಿ ತಾಲೂಕ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಪಣಜಿಯ ಮೆನೇಜಸ್ ಬ್ರಗಾಂಜಾ ಸಭಾಗ್ರಹದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡುತ್ತಿದ್ದರು.



ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿ ಸೋಮಶೇಖರ್ ಮಾತನಾಡಿ, ಗೋವಾದಲ್ಲಿ ಕನ್ನಡಿಗರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೋವಾ ನಿರಾಶ್ರಿತ ಕನ್ನಡಿಗರಿಗೆ ಶಾಶ್ವತ ಪುನರ್ ವಸತಿ ಕಲ್ಪಿಸಿ ಕೊಡಬೇಕು. ಅಂತೆಯೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು. ಕಳೆದ ಬಾರಿ ಗೋವಾ ಕನ್ನಡ ಭವನ ನಿರ್ಮಾಣಕ್ಕೆ ಹಣ ಮಂಜೂರಾದರೂ ಕೂಡ ಇನ್ನು ಜಾಗ ಖರೀದಿ ಆಗದ ಕಾರಣ  ಕನ್ನಡ ಭವನ ನಿರ್ಮಾಣವಾಗಿಲ್ಲ. ಮುಂಬರುವ ದಿನಗಳಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.



ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯಧ್ಯಕ್ಷ ಡಾ. ಸಿದ್ದಣ್ಣ ಮೇಟಿ, ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನೀಲಮ್ಮ ಮೇಟಿ, ಅಖಿಲ ಗೋವಾ ವೀರಶೈವ ಲಿಂಗಾಯತ ಅಧ್ಯಕ್ಷ ಪಡೆದಯ್ಯ ಹಿರೇಮಠ, ಕಸಾಪ ಪಣಜಿ ತಾಲೂಕ ಅಧ್ಯಕ್ಷ ಹನುಮಂತ ಗೊರವರ, ಕರವೇ ಗೋಕಾಕ ತಾಲೂಕು ಅಧ್ಯಕ್ಷ ಬಸವರಾಜ ಖಾನಪ್ಪನವರ, ಗೋವಾ ರಾಜ್ಯ ಘಟಕದ ಮಹಿಳಾ ಪ್ರತಿನಿಧಿ ರೇಣುಕಾ ದಿನ್ನಿ ಮತ್ತಿತರರು ಉಪಸ್ಥಿತರಿದ್ದರು.



ಕಸಾಪ ಗೋವಾ ರಾಜ್ಯದ್ಯಕ್ಷ ಡಾ. ಸಿದ್ದಣ್ಣ ಮೇಟಿ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಸ್ವಾಗತಿಸಿದರು. ಶೀಲಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು, ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಗೋವಾ ರಾಜ್ಯದ ಮೂಲೆ ಮೂಲೆಯಿಂದ ಮಾತ್ರವಲ್ಲರಿಗೆ ಕರ್ನಾಟಕದಿಂದಲೂ ಕೂಡ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top