ಅಂತರ್ ಜಿಲ್ಲಾ ಮಟ್ಟದ ಸಮೂಹ ಗಾಯನ ಸ್ಪರ್ಧೆಯಲ್ಲಿ ಫಿಲೋಮಿನಾ ಪ.ಪೂ. ಕಾಲೇಜಿಗೆ ಪ್ರಶಸ್ತಿ

Upayuktha
0


ಪುತ್ತೂರು: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಸಮೂಹ ಗಾಯನ ಸ್ಪರ್ಧೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ 11,111 ನಗದು ಬಹುಮಾನವನ್ನು ಪಡೆದುಕೊಂಡಿರುತ್ತಾರೆ. 


ಪ್ರಥಮ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ , ಕುಷಿ ವಿಟ್ಲ, ದೀಪ್ತಿ ಕೆ ಆರ್, ಯಶ್ವಿತ್ ಯು, ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾ ಶ್ರೀ ರೈ ,ಮಾನಸ ಬಿ , ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಶ್ರುತಿ ರಂಜನಿ ಸ್ಪರ್ಧೆಯಲ್ಲಿ ಪಾಲ್ಗೊಂಡಿರುತ್ತಾರೆ.


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ನಿರ್ದೇಶಕರಾದ ಸುಮನಾ ರಾವ್, ರಶ್ಮಿ ಪಿ.ಎಸ್ ಹಾಗೂ ಭರತ್ ಜಿ.ಪೈ ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top