ಬ್ಯಾಂಕ್ ಆಫ್ ಬರೋಡಾದಿಂದ ಕನ್ನಡ ದಿನಾಚರಣೆ

Upayuktha
0





ಮಂಗಳೂರು: ಬ್ಯಾಂಕ್ ಆಫ್ ಬರೋಡಾ, ವಲಯ ಕಛೇರಿ, ಮಂಗಳೂರು ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. 




ಈ ಕಾರ್ಯಕ್ರಮಕ್ಕೆ  ಡಾ. ಎಸ್ ಕೃಷ್ಣಮೂರ್ತಿ, ನಿವೃತ್ತ  ಪ್ರೊಫೆಸರ್ ಮುಖ್ಯ ಅತಿಥಿಯಾಗಿ ಆಗಮಿಸಿದರು. ಅವರು ತನ್ನ ಭಾಷಣದಲ್ಲಿ  ಕನ್ನಡ ಭಾಷೆಯ ಸಾಹಿತ್ಯದ ಶ್ರೀಮಂತಿಕೆಯ ಬಗ್ಗೆ,  ಮಾತೃ ಭಾಷೆಯನ್ನು ಮುಂದಿನ ಪೀಳಿಗೆಗಳ ವರೆಗೂ ಉಳಿಸಿ ಬೆಳೆಸಿ ಕೊಂಡು ಬರುವಂತೆ ಹಾಗೂ ಎಲ್ಲಾ ಪ್ರಾದೇಶಿಕ ಭಾಷೆಯಳಿಗೆ ತನ್ನದೇ ಆದ ಮಹತ್ವವಿರುವುದರಿಂದ ಬೇರೆ ಭಾಷೆಗಳನ್ನು ಕಲಿಯುವಂತೆ ಕರೆ ನೀಡಿದರು.  




ವಲಯ ಕಛೇರಿಯ ಮುಖ್ಯಸ್ಥರಾದ ಶ್ರೀಮತಿ ಗಾಯತ್ರಿ ಆರ್ ಮಾತನಾಡಿ ನಮ್ಮ ದೇಶದಲ್ಲಿ ಸುಮಾರು ಸಾವಿರಕ್ಕೂ ಮಿಕ್ಕಿ ಭಾಷೆಗಳಿರುವುದರಿಂದ ನಮ್ಮ ಕೆಲಸದ ನಡುವೆ ಸಮಯ ಮಾಡಿಕೊಂಡು ಹೊಸ ಭಾಷೆಗಳನ್ನು ಕಲಿಯಬಹುದು ಎಂದರು.  




ಪ್ರಾದೇಶಿಕ ಕಛೇರಿಯ ಮುಖ್ಯಸ್ಥರಾದ ಎಮ್ ಶಿವಪ್ರಸಾದ್ ವೆಂಕಟ್ ಸ್ವಾಗತಿಸಿದರು.  ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕಿನ ಸಿಬ್ಬಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮವು ಗಣ್ಯರಿಂದ  ಕನ್ನಡದ ದೀಪ ಬೆಳಗಿಸುವುದರ ಮೂಲಕ ಪ್ರಾರಂಭವಾಗಿ ಪ್ರಾರ್ಥನೆ, ಭಾಷಣ, ವಿಜೇತರಿಗೆ ಪ್ರಮಾಣಪತ್ರ ವಿತರಣೆ ಹಾಗೂ ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಯಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top