ಮಂಗಳೂರು: ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ,ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2023-24ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ,ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು Sevasindhu.karnataka.gov.in ಮೂಲಕ ಡಿಸೆಂಬರ್ 13ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ಸಾಲಿನ ಸರ್ಕಾರದ ಆದೇಶ, ತಿದ್ದುಪಡಿ ಆದೇಶ, ಹಾಗೂ 2023ರ ಜನವರಿ 2ರ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್: www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0824-2951327, 2451527 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ