ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‍ಶಿಫ್: ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಆಳ್ವಾಸ್‍ಗೆ ಸಮಗ್ರ ಪ್ರಶಸ್ತಿ

Upayuktha
0



ಮೂಡುಬಿದಿರೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಸಂಸ್ಥೆ (ರಿ.) ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಯೂತ್, ಜೂನಿಯರ್ ಮತ್ತು ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‍ಶಿಫ್‍ನ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಎಲ್ಲಾ ಆರು ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು  ಆಳ್ವಾಸ್ ಪಡೆದುಕೊಂಡಿತು. 




ಪುರುಷರ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಹಾಗೂ ಮಹಿಳಾ ವಿಭಾಗದ ಯೂತ್, ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದಿದೆ. 




ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಜೂನಿಯರ್ ವಿಭಾಗದಲ್ಲಿ ಆಳ್ವಾಸ್‍ನ ಶಿವಾನಂದ ಪಡೆದುಕೊಂಡರು. ಮಹಿಳಾ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪಡೆದುಕೊಂಡರು. ಕ್ರೀಡಾಪಟುಗಳ ಉತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಅಭಿನಂದಿಸಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter      





Post a Comment

0 Comments
Post a Comment (0)
Mandovi Motors
Mandovi Motors
To Top