ಕಾರವಾರ: ಯುವ ಮತದಾರರ ಜಾಗೃತಿಗಾಗಿ ಬೀಚ್ ವಾಲಿಬಾಲ್ ಪಂದ್ಯ

Upayuktha
0


ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮೀತಿ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾರವಾರ ತಾಲ್ಲೂಕು ಪಂಚಾಯತ್‍ನಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರನಿಮಿತ್ತ  ಇಂದು ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ , ಯುವ ಮತದಾರರಿಗೆ ಬೀಚ್‍ವಾಲಿಬಾಲ್ ಪಂದ್ಯ ಆಯೋಜಿಸಲಾಗಿತ್ತು.


ಜಿಲ್ಲಾ ಪಂಚಾಯತ್‍ನ ಮುಖ್ಯ ಲೆಕ್ಕಾಧಿಕಾರಿ ಸತೀಶ ಪವಾರ, ವಾಲಿಬಾಲ್‍ಸರ್ವ್‍ಮಾಡುವಮೂಲಕ ಪಂದ್ಯಾವಳಿಗೆ ಚಾಲನೆನೀಡಿ ಮಾತನಾಡಿ,  ಸಂವಿಧಾನ ಬದ್ಧವಾಗಿ ಲಭ್ಯವಿರುವ ಮತದಾನ ಹಕ್ಕನ್ನು ಹೊಂದಲು ಭಾರತ ಚುನಾವಣಾ ಆಯೋಗ ಉತ್ತಮವಾದ ಅವಕಾಶ ಕಲ್ಪಿಸಿದ್ದು, ಜಿಲ್ಲೆಯ ಯುವ ಸಮುದಾಯ ಸೇರಿದಂತೆ ಎಲ್ಲ ಅರ್ಹ ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ನೋಂದಣಿ, ತಿದ್ದುಪಡಿ, ತೆಗೆದು ಹಾಕುವ ಕಾರ್ಯಕ್ಕೆ ಕೈಜೋಡಿಸಬೇಕಿದೆ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಸಮಾಜದ ಪ್ರತಿಯೊಬ್ಬರ ನಾಗರಿಕರ ಕರ್ತವ್ಯ ಎಂದರು.


ಬೀಚ್‍ವಾಲಿಬಾಲ್‍ ಪಂದ್ಯಾವಳಿಯಲ್ಲಿ ಪುರುಷರು ಹಾಗೂ ಮಹಿಳಾ ವಿಭಾಗದಲ್ಲಿ ಒಟ್ಟು 10 ತಂಡಗಳು ಭಾಗವಹಿಸಿದ್ದು, ವಿಜೇತರಾದವರಿಗೆ ಜಿಲ್ಲಾ ಪಂಚಾಯತ್‍ನ ಅಭಿವೃದ್ಧಿ ಶಾಖೆಯ ಸಹಾಯಕ ಕಾರ್ಯದರ್ಶಿ ಸುನಿಲ್ ನಾಯ್ಕ್ ಹಾಗೂ ಕಾರವಾರ ತಾಲ್ಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿಗ ಪ್ರಿಯಾ ನಾಯ್ಕ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಕಾರವಾರ ತಾಲ್ಲೂಕು ಪಂಚಾಯತ್‍ನ ವ್ಯವಸ್ಥಾಪಕಿ ಅನಿತಾ ಬಂಡಿಕಟ್ಟಿ, ಜಿಲ್ಲಾ ಐಇಸಿ ಸಂಯೋಜಕರಾದ ಫಕ್ಕೀರಪ್ಪ ತುಮ್ಮಣ್ಣನವರ ಸೇರಿದಂತೆ ಜಿಪಂ ಹಾಗೂ ತಾಪಂ, ಯುವಜನ ಸಬಲೀಕರಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top